Home ಟಾಪ್ ಸುದ್ದಿಗಳು ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಸಂಕಷ್ಟ: ಬಂಧನ ವಾರೆಂಟ್ ಹೊರಡಿಸಿದ ನ್ಯಾಯಾಲಯ

ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಸಂಕಷ್ಟ: ಬಂಧನ ವಾರೆಂಟ್ ಹೊರಡಿಸಿದ ನ್ಯಾಯಾಲಯ

ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ವಿರುದ್ಧ ಅಲ್ಲಿನ ನ್ಯಾಯಾಲಯವು ಬಂಧನ ವಾರೆಂಟ್ ಹೊರಡಿಸಿದೆ.


ಶೇಖ್ ಹಸೀನಾ ಅವರು ಆಗಸ್ಟ್ 5 ರಂದು ದೇಶದ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ತಮ್ಮ ಸಹೋದರಿ ಶೇಖ್ ರೆಹಾನಾ ಅವರೊಂದಿಗೆ ಬಾಂಗ್ಲಾದೇಶವನ್ನು ತೊರೆದು ಭಾರತಕ್ಕೆ ಬಂದಿದ್ದರು.


ಶೇಖ್ ಹಸೀನಾ ಅವರು 45 ನಿಮಿಷಗಳಲ್ಲಿ ದೇಶವನ್ನು ತೊರೆಯುವಂತೆ ಬಾಂಗ್ಲಾದೇಶ ಸೇನೆಯಿಂದ ಅಲ್ಟಿಮೇಟಮ್ ಸ್ವೀಕರಿಸಿದ್ದರು ಮತ್ತು ನಂತರ ಅವರು ತಕ್ಷಣವೇ ರಾಜೀನಾಮೆ ನೀಡಿ ದೇಶವನ್ನು ಬಿಟ್ಟಿದ್ದರು.


ಆದರೆ ಶೇಖ್ ಹಸೀನಾಗೆ ಸಂಕಷ್ಟ ಹೆಚ್ಚಿದೆ. ಬಾಂಗ್ಲಾದೇಶದ ನ್ಯಾಯಾಲಯ ಅರೆಸ್ಟ್ ವಾರೆಂಟ್ ಹೊರಡಿಸಿದೆ. ಬಾಂಗ್ಲಾದೇಶ ನ್ಯಾಯಾಲಯವು ಶೇಖ್ ಹಸೀನಾ ವಿರುದ್ಧ ಇಂದು ಅಕ್ಟೋಬರ್ 17 ಗುರುವಾರ ಬಂಧನ ವಾರಂಟ್ ಹೊರಡಿಸಿದೆ. ಬಾಂಗ್ಲಾದೇಶದ ಅಂತಾರಾಷ್ಟ್ರೀಯ ಕ್ರಿಮಿನಲ್ ಟ್ರಿಬ್ಯೂನಲ್ ನ ಮುಖ್ಯ ಪ್ರಾಸಿಕ್ಯೂಟರ್ ಮೊಹಮ್ಮದ್ ತಾಜುಲ್ ಇಸ್ಲಾಂ ಈ ಬಂಧನ ವಾರಂಟ್ ಕುರಿತು ಮಾಹಿತಿ ನೀಡಿದರು.

Join Whatsapp
Exit mobile version