Home ಟಾಪ್ ಸುದ್ದಿಗಳು ಲಾಲು ಪ್ರಸಾದ್ ಯಾದವ್ ವಿರುದ್ಧ ಬಂಧನ ವಾರಂಟ್ ಹೊರಡಿಸಿದ ನ್ಯಾಯಾಲಯ

ಲಾಲು ಪ್ರಸಾದ್ ಯಾದವ್ ವಿರುದ್ಧ ಬಂಧನ ವಾರಂಟ್ ಹೊರಡಿಸಿದ ನ್ಯಾಯಾಲಯ

ಗ್ವಾಲಿಯರ್: 1995-97ರಲ್ಲಿ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ಅಕ್ರಮವಾಗಿ ಖರೀದಿಸಿದ ಪ್ರಕರಣ ಸಂಬಂಧ ಬಿಹಾರದ ಮಾಜಿ ಮುಖ್ಯಮಂತ್ರಿ, ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ (75) ವಿರುದ್ಧ ಮಧ್ಯಪ್ರದೇಶದ ಗ್ವಾಲಿಯರ್ ನ ವಿಶೇಷ ನ್ಯಾಯಾಲಯವು ಇಂದು ಬಂಧನ ವಾರಂಟ್ ಹೊರಡಿಸಿದೆ.


ಗ್ವಾಲಿಯರ್ ನ ಜೆಎಂಎಫ್ ಸಿ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಾದ ಮಹೇಂದ್ರ ಸೈನಿ ಅವರು ಲಾಲು ಯಾದವ್ ವಿರುದ್ಧ ಬಂಧನ ವಾರಂಟ್ ಹೊರಡಿಸಿದ್ದಾರೆ.


1995-97ರಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಅಧಿಕೃತ ಡೀಲರ್ನಿಂದ ಶಸ್ತ್ರಾಸ್ತ್ರಗಳನ್ನು ಖರೀದಿಸಿದ ಪ್ರಕರಣ ಇದಾಗಿದೆ. ಪ್ರಕರಣದಲ್ಲಿ 23 ಆರೋಪಿಗಳಿದ್ದು, ಇಂದರ್ಗಂಜ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

Join Whatsapp
Exit mobile version