ಇಡಿ ಕರೆಗೆ ಸ್ಪಂದಿಸದ ಕೇಜ್ರಿವಾಲ್: ಸಮನ್ಸ್ ನೀಡಿದ ನ್ಯಾಯಾಲಯ

Prasthutha|

ನವದೆಹಲಿ: ಅಬಕಾರಿ ನೀತಿ ಹಗರಣ ಸಂಬಂಧ ವಿಚಾರಣೆಗೆ ಇಡಿ ಸಮನ್ಸ್ ನೀಡಿದರೂ ಸ್ಪಂದಿಸದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಈಗ ದೆಹಲಿ ಕೋರ್ಟ್ನಿಂದಲೇ ಸಮನ್ಸ್ ಹೋಗಿದೆ.
ಮಾರ್ಚ್ 16ಕ್ಕೆ ಕೋರ್ಟ್ ಗೆ ಹಾಜರಾಗಬೇಕೆಂದು ಸೂಚಿಸಿದೆ.

- Advertisement -


ತಾನು ಎಂಟು ಬಾರಿ ಸಮನ್ಸ್ ನೀಡಿದರೂ ಕೇಜ್ರಿವಾಲ್ ಸ್ಪಂದಿಸುತ್ತಿಲ್ಲ ಎಂದು ಜಾರಿ ನಿರ್ದೇಶನಾಲಯವು ಕೋರ್ಟ್ ನಲ್ಲಿ ದೂರು ದಾಖಲಿಸಿತ್ತು. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ಈ ಸಮನ್ಸ್ ಹೊರಡಿಸಿದೆ. ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ದಿವ್ಯಾ ಮಲ್ಹೋತ್ರಾ ಅವರು ಮಾರ್ಚ್ 16 ರಂದು ನ್ಯಾಯಾಲಯ ಮುಂದೆ ಹಾಜರಾಗುವಂತೆ ಕೇಜ್ರಿವಾಲ್ ಅವರಿಗೆ ಸೂಚಿಸಿದ್ದಾರೆ.



Join Whatsapp