ಮಗನನ್ನು ಹೊರಹಾಕಿ, ತಂದೆಗೆ ಮನೆ ಹಸ್ತಾಂತರಿಸಲು ಕೋರ್ಟ್ ಆದೇಶ !

Prasthutha: January 25, 2022

ಚಿಕ್ಕಬಳ್ಳಾಪುರ: ತಾನು ಕಷ್ಟಪಟ್ಟು ದುಡಿದು ಸಂಪಾದಿಸಿ ಖರೀದಿಸಿದ ಮನೆಯಿಂದ ತನ್ನನ್ನೇ ಹೊರಹಾಕಿದ್ದ ಮಗನ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿದ್ದ ತಂದೆ, ತನ್ನ ಮನೆಯನ್ನು ಮರಳಿ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ತಂದೆಯ ಮನವಿಯನ್ನು ಸ್ಬೀಕರಿಸಿರುವ ನ್ಯಾಯಾಲಯ, ಮಗನನ್ನು ಮನೆಯಿಂದ ಹೊರಹಾಕುವಂತೆ ಪೊಲೀಸರಿಗೆ ಸೂಚನೆ ನೀಡಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಅಂಜನಿ ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ನಿವೃತ್ತ ಪ್ರಾಧ್ಯಾಪಕ ಮುನಿಸ್ವಾಮಿ ಅವರನ್ನು ಮಗ ಎಂ.ಸುಭಾಷ್ ಮತ್ತು ಸೊಸೆ ಮಂಜುಳಾ ಬಲವಂತಾಗಿ ಮನೆಯಿಂದ ಹೊರಹಾಕಿದ್ದರು. ಅಂಜನಿ ಬಡಾವಣೆಯ ಮನೆಯನ್ನು ಮುನಿಸ್ವಾಮಿ ಸ್ವಯಾರ್ಜಿತವಾಗಿ ಖರೀದಿಸಿದ್ದರು.

ಮಗ ಮನೆಯಿಂದ ಹೊರ ಹಾಕಿದ್ದನ್ನು ಪ್ರಶ್ನಿಸಿ ಚಿಕ್ಕಬಳ್ಳಾಪುರದ ಎಸಿ ಕೋರ್ಟ್ ಮತ್ತು ಹೈಕೋರ್ಟ್​ಗಳಲ್ಲಿ ಮುನಿಸ್ವಾಮಿ ಅರ್ಜಿ ಸಲ್ಲಿಸಿದ್ದರು. ಇದೀಗ ವಿಚಾರಣೆ ನಡೆಸಿರುವ ಕೋರ್ಟ್​, ಅಕ್ರಮವಾಗಿ ಮನೆ ಪ್ರವೇಶಿಸಿದ್ದ ಮಗ ಸುಭಾಷ್ ಮತ್ತು ಸೊಸೆ ಮಂಜುಳಾರನ್ನು ಹೊರಹಾಕಿ ಮುನಿಸ್ವಾಮಿ ಪ್ರವೇಶ ಕಲ್ಪಿಸುವಂತೆ ಪೊಲೀಸರಿಗೆ ಆದೇಶ ಹೊರಡಿಸಿದೆ.

ಕೋರ್ಟ್​ನ ಆದೇಶದಂತೆ ಮಗ ಮತ್ತು ಸೊಸೆಯನ್ನ ಹೊರಹಾಕಿರುವ ಚಿಂತಾಮಣಿ ಪೊಲೀಸರು ಮುನಿಸ್ವಾಮಿಗೆ ಪ್ರವೇಶ ಕಲ್ಪಿಸಿದ್ದಾರೆ.

ಕೋರ್ಟ್ ಆದೇಶದ ಮನೆಯಿಂದ ಹೊರಹಾಕಲ್ಪಟ್ಟ ಬಳಿಕವೂ ಮಗ ಹಾಗೂ ಸೊಸೆ ಮುನಿಸ್ವಾಮಿ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!