Home ಟಾಪ್ ಸುದ್ದಿಗಳು ಸತೀಶ್ ಜಾರಕಿಹೊಳಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ ವಿಚಾರಣೆ ನಡೆಸಲು ಕೋರ್ಟ್ ಆದೇಶ

ಸತೀಶ್ ಜಾರಕಿಹೊಳಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ ವಿಚಾರಣೆ ನಡೆಸಲು ಕೋರ್ಟ್ ಆದೇಶ

ಮಂಗಳೂರು : ಸಚಿವ ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ ವಿಚಾರಣೆ ನಡೆಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಹಿಂದೂ ಪದದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಹಿನ್ನೆಲೆ ನ್ಯಾಯಾಲಯದಿಂದ ಆದೇಶ ಹೊರಡಿಸಲಾಗಿದೆ.

2022ರ ನವೆಂಬರ್ 6ರಂದು ಬೆಳಗಾವಿಯಲ್ಲಿ ನಡೆದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಸತೀಶ್ ಜಾರಕಿಹೊಳಿ, ಹಿಂದು ಎಂಬ ಪದ ಆಶ್ಲೀಲ, ಕೊಳಕು ಎಂಬ ಅರ್ಥ ನೀಡುತ್ತದೆಹಿಂದುತ್ವ ಎಂಬುದು ಪರ್ಷಿಯನ್ ಪದವಾಗಿದೆ ಎಂದು ಹೇಳಿಕೆ ನೀಡಿದ್ದರು.

ಸತೀಸ್‌ ಜಾರಕಿಹೊಳಿ ಹೇಳಿಕೆ ಹಿನ್ನಲೆ ವಕೀಲ ದಿಲೀಪ್ ಕುಮಾರ್ ಎಂಬುವವರು ನೀಡಿದ್ದ ಖಾಸಗಿ ದೂರಿನ ಪ್ರಕರಣದ ಅರ್ಜಿ ವಿಚಾರಣೆ ಕೈಗೆತ್ತಿಕೊಂಡು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಸಚಿವ ಜಾರಕಿಹೊಳಿ ವಿರುದ್ದ ಕ್ರಿಮಿನಲ್ ಕೇಸ್ ದಾಖಲಿ ವಿಚಾರಣೆ ನಡೆಸುವಂತೆ ಆದೇಶ ಹೊರಡಿಸಿದೆ.

Join Whatsapp
Exit mobile version