ಹಿಂದೂ ದೇವತೆಗಳ ಅವಹೇಳನ ಪ್ರಕರಣ| ಸಚಿವ ಮುರುಗೇಶ್ ನಿರಾಣಿ ವಿರುದ್ಧ ತನಿಖೆಗೆ ಆದೇಶ

Prasthutha|

ಬೆಂಗಳೂರು : ಹಿಂದೂ ದೇವತೆಗಳ ವಿರುದ್ಧ ಆಕ್ಷೇಪಾರ್ಹ ಸಂದೇಶ ರವಾನಿಸಿದ ಆರೋಪದ ಹಿನ್ನಲೆಯಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ವಿರುದ್ಧ ತನಿಖೆ ನಡೆಸುವಂತೆ ಕೊಡಿಗೇಹಳ್ಳಿ ಪೊಲೀಸ್ ಠಾಣೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.

- Advertisement -

ಗೋವಿಂದರಾಮ್‌ ಎಂಬವರು ಸಲ್ಲಿಸಿದ್ದ ಖಾಸಗಿ ದೂರು ವಿಚಾರಣೆ ನಡೆಸಿದ ನ್ಯಾಯಾಲಯ, ಸೆ.13ರೊಳಗೆ ತನಿಖಾ ವರದಿ ಸಲ್ಲಿಸಲು ಸೂಚನೆ ನೀಡಿದೆ.”ಹಿಂದೂ ದೇವತೆಗಳನ್ನು ಅವಹೇಳನ ಮಾಡುವ ಸಂದೇಶವನ್ನು ವಾಟ್ಸ್ ಆಯಪ್ ಗ್ರೂಪ್‌ನಲ್ಲಿ ನಿರಾಣಿ ಅವರು ರವಾನಿಸಿದ್ದು, ಅವರ ವಿರುದ್ಧ ಐಪಿಸಿ ಸೆಕ್ಷನ್ 153, 259, 259ಎ ಅಡಿಯಲ್ಲಿ ಕ್ರಮ ಕೈಗೊಳ್ಳಬೇಕು’ ಎಂದು ಅರ್ಜಿದಾರರು ಕೋರಿದ್ದಾರೆ.ಕೊಡಿಗೇಹಳ್ಳಿ ಠಾಣೆಯಲ್ಲಿ ಈ ಸಂಬಂಧ ಎಫ್‌ಐಆರ್ ದಾಖಲಾಗುವ ಸಾಧ್ಯತೆ ಇದೆ.



Join Whatsapp