ಬಿಜೆಪಿ ಮುಖಂಡ ಗೋ.ಮಧುಸೂಧನ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ನ್ಯಾಯಾಲಯದಿಂದ ಆದೇಶ

Prasthutha|

ಮೈಸೂರು: ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್. ರಂಗಪ್ಪ ಅವರ ವಿರುದ್ಧ ಸುಳ್ಳು ಆರೋಪ ಮಾಡಿ ಅಪಪ್ರಚಾರ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಮೈಸೂರಿನ 3ನೇ ಜೆಎಂಎಫ್‌ಸಿ ನ್ಯಾಯಾಲಯ , ಬಿಜೆಪಿ ಮುಖಂಡ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಗೋ.ಮಧುಸೂಧನ್ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸುವಂತೆ ಸೂಚಿಸಿದೆ.

- Advertisement -


ತಮ್ಮ ವಿರುದ್ಧ ಸುಳ್ಳು ಆರೋಪ ಮಾಡಿ‌ ಅಪಪ್ರಚಾರ ಮಾಡಿದ್ದಾರೆ ಎಂದು ಆರೋಪಿಸಿ ಪ್ರೊ.ಕೆ.ಎಸ್ ರಂಗಪ್ಪ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.ಈ ಸಂಬಂಧ ವಿಚಾರಣೆ ನಡೆಸಿದ್ದ ಮೈಸೂರಿನ 3ನೇ ಜೆಎಂಎಫ್‌ಸಿ ನ್ಯಾಯಾಲಯ ಐಪಿಸಿ ಸೆಕ್ಷನ್ 499, 500,501, ಅಡಿ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಆದೇಶ ನೀಡಿದೆ. ಸಮನ್ಸ್ ಜಾರಿಗೂ ಅನುಮತಿ ನೀಡಿದೆ.


ಈ ಸಂಬಂಧ ಸುದ್ದಿಗಾರರಿಗೆ ಮಾಹಿತಿ ನೀಡಿರುವ ಕೆ.ಎಸ್‌.ರಂಗಪ್ಪ, ʻ2020ರ ಜನವರಿಯಲ್ಲಿ ಬೆಂಗಳೂರಿನಲ್ಲಿ ಆಯೋಜಿಸಿದ್ದ ಇಂಡಿಯನ್ ಸೈನ್ಸ್ ಕಾಂಗ್ರೆಸ್ ಸಮಾವೇಶದ ಅಧ್ಯಕ್ಷನಾಗಿದ್ದ ವೇಳೆ ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ನಾನು ವೇದಿಕೆ ಹಂಚಿಕೊಳ್ಳದಂತೆ ಸಂಚು ರೂಪಿಸಿ ನನ್ನ ವಿರುದ್ಧ ಸುಳ್ಳು ಆರೋಪಗಳ ಮೂಲಕ ಗೋ.ಮಧುಸೂದನ್ ಅಪಪ್ರಚಾರ ಮಾಡಿದ್ದರು. ಈ ಬಗ್ಗೆ ನಾನು ನ್ಯಾಯಾಲದ ಮೊರೆ ಹೋಗಿದ್ದೆ. ಇದೀಗ ನ್ಯಾಯಾಲಯವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಧುಸೂದನ್ ವಿರುದ್ಧ ಕ್ರಿಮಿನಲ್ ಕೇಸು ದಾಖಲಿಸಲು ಆದೇಶಿಸಿದೆ. ಇದು ಸತ್ಯಕ್ಕೆ ಸಂದ ಜಯವಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ



Join Whatsapp