ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಹೊಸ ಸಂಕಷ್ಟ ಎದುರಾಗಿದೆ. 2006-07ರ ವೇಳೆ ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಉಪ ಮುಖ್ಯಮಂತ್ರಿಯಾಗಿದ್ದ ಸಂದರ್ಭ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿ ‘ವಿಶೇಷ ಕ್ರಿಮಿನಲ್ ಕೇಸ್’ ದಾಖಲಿಸುವಂತೆ ಬೆಂಗಳೂರಿನ ವಿಶೇಷ ನ್ಯಾಯಾಲಯ ಆದೇಶ ನೀಡಿದೆ.
ವಾಸುದೇವ ರೆಡ್ಡಿ ಎಂಬುವವರು ಖಾಸಗಿ ದೂರನ್ನು ಸಲ್ಲಿಸಿದ್ದರು. ಈ ದೂರಿನ ಆಧಾರದ ಮೇಲೆ ಚುನಾಯಿತ ಸಂಸದರು ಮತ್ತು ಶಾಸಕರಿಗೆ ಸಂಬಂಧಿಸಿದ ಕ್ರಿಮಿನಲ್ ಪ್ರಕರಣಗಳ ವಿಶೇಷ ನ್ಯಾಯಾಲಯದ ಸೆಷನ್ಸ್ ನ್ಯಾಯಾಧೀಶ ಬಿ ಜಯಂತ ಕುಮಾರ್ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಆದೇಶಿಸಿದ್ದಾರೆ.
ಬಿ.ಎಸ್. ಯಡಿಯೂರಪ್ಪ ವಿರುದ್ಧ “ಭ್ರಷ್ಟಾಚಾರ ತಡೆ ಕಾಯಿದೆ, 1988ರ ಕಲಂ 13(1)(ಡಿ) ಆರ್/ಡಬ್ಲ್ಯೂ ಕಲಂ. 13(2) ರ ಅಡಿಯಲ್ಲಿ ಶಿಕ್ಷಾರ್ಹ ಅಪರಾಧಕ್ಕಾಗಿ ವಿಶೇಷ ಕ್ರಿಮಿನಲ್ ಮೊಕದ್ದಮೆಯನ್ನು ದಾಖಲಿಸಿ ಎಂದು ನ್ಯಾಯಾಲಯ ಸೂಚಿಸಿದೆ.