Home ಟಾಪ್ ಸುದ್ದಿಗಳು ‘ಎಮರ್ಜೆನ್ಸಿ’ ಚಿತ್ರಕ್ಕೆ ಪ್ರಮಾಣಪತ್ರ ನೀಡಲು ಸಿಬಿಎಫ್’ಸಿಗೆ ನಿರ್ದೇಶಿಸಲು ಕೋರ್ಟ್ ನಕಾರ

‘ಎಮರ್ಜೆನ್ಸಿ’ ಚಿತ್ರಕ್ಕೆ ಪ್ರಮಾಣಪತ್ರ ನೀಡಲು ಸಿಬಿಎಫ್’ಸಿಗೆ ನಿರ್ದೇಶಿಸಲು ಕೋರ್ಟ್ ನಕಾರ

ನವದೆಹಲಿ: ಸಂಸದೆ ಹಾಗೂ ಬಾಲಿವುಡ್ ನಟಿ ಕಂಗನಾ ರನೌತ್ ಅವರು ನಿರ್ದೇಶಿಸಿ, ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ‘ಎಮರ್ಜೆನ್ಸಿ’ ಚಿತ್ರಕ್ಕೆ ತಕ್ಷಣವೇ ಪ್ರಮಾಣಪತ್ರ ನೀಡಲು ಕೇಂದ್ರೀಯ ಚಲನಚಿತ್ರ ಪ್ರಮಾಣೀಕರಣ ಮಂಡಳಿಗೆ (ಸಿಬಿಎಫ್ ಸಿ) ನಿರ್ದೇಶಿಸಲು ಬಾಂಬೆ ಹೈಕೋರ್ಟ್ ನಿರಾಕರಿಸಿದೆ.


ಇದರಿಂದಾಗಿ ಸೆಪ್ಟೆಂಬರ್ 6ರಂದು ಚಿತ್ರ ಬಿಡುಗಡೆಯಾಗುವುದು ಅನುಮಾನವಾಗಿದೆ.


ಮಧ್ಯಪ್ರದೇಶದ ಹೈಕೋರ್ಟ್ ಆದೇಶಕ್ಕೆ ವ್ಯತಿರಿಕ್ತವಾಗಿರುವುದರಿಂದ ‘ಎಮರ್ಜೆನ್ಸಿ’ ಚಿತ್ರಕ್ಕೆ ಪ್ರಮಾಣಪತ್ರ ನೀಡುವಂತೆ ಸೆನ್ಸಾರ್ ಮಂಡಳಿಗೆ ನಿರ್ದೇಶಿಸಲು ಬಾಂಬೆ ಹೈಕೋರ್ಟ್ ನಿರಾಕರಿಸಿದೆ ಎಂದು ವರದಿಯಾಗಿದೆ.


ಸೆನ್ಸಾರ್ ಪ್ರಮಾಣಪತ್ರ ನೀಡಲು ಸಿಬಿಎಫ್ ಸಿಗೆ ನಿರ್ದೇಶನ ನೀಡುವಂತೆ ಕೋರಿ ‘ಎಮರ್ಜೆನ್ಸಿ’ ಚಿತ್ರತಂಡ ಬಾಂಬೆ ಹೈಕೋರ್ಟ್ ಗೆ ಮೊರೆ ಹೋಗಿತ್ತು. ಇಂದು ತುರ್ತು ವಿಚಾರಣೆ ನಡೆಸಿದ ನ್ಯಾಯಾಲಯವು ಸೆಪ್ಟೆಂಬರ್ 18ರೊಳಗೆ ನಿರ್ಧಾರ ತೆಗೆದುಕೊಳ್ಳುವಂತೆ ಸಿಬಿಎಫ್ಸಿಗೆ ಸೂಚಿಸಿದೆ. ಜತೆಗೆ, ಅರ್ಜಿ ವಿಚಾರಣೆಯನ್ನು ಸೆಪ್ಟೆಂಬರ್ 19ಕ್ಕೆ ಮುಂದೂಡಿದೆ.

Join Whatsapp
Exit mobile version