ಸೂರತ್: ತಮ್ಮ ವಿರುದ್ಧದ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ವಿಧಿಸಲಾಗಿರುವ ಶಿಕ್ಷೆಗೆ ತಡೆ ನೀಡಲು ಕೋರಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಮನವಿಯನ್ನು ಸೂರತ್ ನ್ಯಾಯಾಲಯ ತಿರಸ್ಕರಿಸಿದೆ.
ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ತಡೆಯಾಜ್ಞೆ ನೀಡುವಂತೆ ಕೋರಿ ರಾಹುಲ್ ಗಾಂಧಿಯವರು ನ್ಯಾಯಾಲಯದ ಮೆಟ್ಟಿಲೇರಿದ್ದರು. ನ್ಯಾಯಾಲಯ ಅವರ ಅರ್ಜಿಯನ್ನು ಗುರುವಾರ ವಜಾಗೊಳಿಸಿದೆ.
ಏಪ್ರಿಲ್ 3 ರಂದು ಪ್ರಕರಣದಲ್ಲಿ ಅಪರಾಧ ಸಾಬೀತಾದ ನಂತರ ಮೇಲ್ಮನವಿ ಸಲ್ಲಿಸಿದ್ದ ರಾಹುಲ್ ಗಾಂಧಿಗೆ ಸೂರತ್ ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಿತ್ತು.
ಮೋದಿ ಉಪನಾಮ ಪ್ರಕರಣಕ್ಕೆ ಸಂಬಂಧಿಸಿ ವಯನಾಡ್ ಸಂಸದರಾಗಿದ್ದ ರಾಹುಲ್ ಗಾಂಧಿಗೆ ಸೂರತ್ ಕೆಳ ನ್ಯಾಯಾಲಯವು ಮಾರ್ಚ್ 23 ರಂದು ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ನಂತರ ಅವರ ಸಂಸದ ಸ್ಥಾನವನ್ನು ಅನರ್ಹಗೊಳಿಸಲಾಗಿತ್ತು.