ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಇಂದು ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ಜೆಡಿಎಸ್ ಶಾಸಕ ಎಚ್ಡಿ ರೇವಣ್ಣಗೆ ನಿರಾಸೆಯಾಗಿದೆ.
ಲೈಂಗಿಕ ದೌರ್ಜನ್ಯ ಪ್ರಕರಣದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಎಸಿಎಂಎಂ ನ್ಯಾಯಾಲಯವು ಆದೇಶವನ್ನು ಮೇ 20ಕ್ಕೆ ಕಾಯ್ದಿರಿಸಿದೆ.
ಕಳೆದ ಎರಡು ದಿನಗಳಿಂದ ಎಸ್ ಐಟಿ ಹಾಗೂ ರೇವಣ್ಣ ಪರ ವಕೀಲರಿಂದ ವಾದ-ಪ್ರತಿವಾದ ಆಲಿಸಿದ್ದು, ಇದೀಗ ಅಂತಿಮವಾಗಿ ಕೋರ್ಟ್ ರೇವಣ್ಣ ಅವರ ಜಾಮೀನು ಆದೇಶವನ್ನು ಮೇ 20ಕ್ಕೆ ಕಾಯ್ದಿರಿಸಿದೆ. ಇದರೊಂದಿಗೆ ಸೋಮವಾರದವರೆಗೆ ಮಧ್ಯಂತರ ಜಾಮೀನು ಮುಂದುವರಿಕೆಯಾಗಿದೆ.