Home ಟಾಪ್ ಸುದ್ದಿಗಳು ಮಾಜಿ ಸಚಿವ ನಾಗೇಂದ್ರಗೆ ಮತ್ತೆ 5 ದಿನ ಇಡಿ ಕಸ್ಟಡಿ: ಕೋರ್ಟ್ ಆದೇಶ

ಮಾಜಿ ಸಚಿವ ನಾಗೇಂದ್ರಗೆ ಮತ್ತೆ 5 ದಿನ ಇಡಿ ಕಸ್ಟಡಿ: ಕೋರ್ಟ್ ಆದೇಶ

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಪ್ರಕರಣದಲ್ಲಿ ಕಾಂಗ್ರೆಸ್ ಮಾಜಿ ಸಚಿವ ನಾಗೇಂದ್ರ ಅವರನ್ನ ಮತ್ತೆ 5 ದಿನ ಇಡಿ ಕಸ್ಟಡಿಗೆ ನೀಡಿ 82ನೇ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶಿಸಿದೆ.


6 ದಿನಗಳ ಇ.ಡಿ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ಗುರುವಾರ (ಜು.18) ವೈದ್ಯಕೀಯ ಪರೀಕ್ಷೆ ಬಳಿಕ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಈ ವೇಳೆ ಇ ಡಿ ಪರ ವಕೀಲ ಪ್ರಸನ್ನಕುಮಾರ್, ಇನ್ನೂ ವಿಚಾರಣೆ ಬಾಕಿ ಇರುವುದರಿಂದ 8 ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು. ಆದರೆ ವಾದ-ಪ್ರತಿವಾದಗಳನ್ನು ಆಲಿಸಿದ ಬಳಿಕ 5 ದಿನಗಳ ಕಾಲ ಇ.ಡಿ ಕಸ್ಟಡಿಗೆ ಕೋರ್ಟ್ ಆದೇಶಿಸಿತು.


82ನೇ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾ. ಸಂತೋಷ್ ಗಜಾನನ ಭಟ್ ಇ.ಡಿ ಕಸ್ಟಡಿಗೆ ನೀಡಿ ಆದೇಶ ಪ್ರಕಟಿಸಿದರು.

Join Whatsapp
Exit mobile version