ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್‌ಗೆ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

Prasthutha|

ಪಾಲನ್ಪುರ: ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್‌ಗೆ ಗುಜರಾತ್‌ನ ಪಾಲನ್ಪುರದ ಸೆಷನ್ಸ್ ನ್ಯಾಯಾಲಯ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. 1996ರಲ್ಲಿ ವಕೀಲರೊಬ್ಬರನ್ನು ಬಂಧಿಸಲು ಡ್ರಗ್ಸ್ ಇಟ್ಟಿದ್ದ ಪ್ರಕರಣದಲ್ಲಿ ಈ ಶಿಕ್ಷೆ ನೀಡಿದೆ.

- Advertisement -

ಕಸ್ಟಡಿ ಸಾವಿನ ಪ್ರಕರಣದಲ್ಲಿ ಭಟ್ ಜೈಲಿನಲ್ಲಿದ್ದಾರೆ.1996ರಲ್ಲಿ ವಕೀಲರು ತಂಗಿದ್ದ ಪಾಲನ್ಪುರದ ಹೋಟೆಲ್ ಕೊಠಡಿಯಿಂದ ಡ್ರಗ್ಸ್ ವಶಪಡಿಸಿಕೊಂಡಿದ್ದ ಸುಳ್ಳು ಪ್ರಕರಣದಲ್ಲಿ ರಾಜಸ್ಥಾನ ಮೂಲದ ವಕೀಲರೊಬ್ಬರನ್ನು ಸಿಲುಕಿಸಿದ್ದರು ಎನ್ನಲಾಗಿದೆ.

ಬನಸ್ಕಾಂತ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದ ಸಂಜೀವ್ ಭಟ್ 2015ರಲ್ಲಿ ಸೇವೆಯಿಂದ ವಜಾಗೊಂಡಿದ್ದರು.

- Advertisement -

ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಜೆ ಎನ್ ಠಕ್ಕರ್ ಬುಧವಾರ ನಾರ್ಕೋಟಿಕ್ಸ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸ್ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಸಂಜೀವ್ ಭಟ್ ಅವರನ್ನು ದೋಷಿ ಎಂದು ತೀರ್ಪು ನೀಡಿದ್ದರು. ಇಂದು ಶಿಕ್ಷೆಯ ಪ್ರಮಾಣ ಪ್ರಕಟವಾಗಿದೆ.

Join Whatsapp