Home ಜಾಲತಾಣದಿಂದ ಪತ್ನಿಯನ್ನು ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ಪತ್ನಿಯನ್ನು ಕೊಲೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ

ಬೆಂಗಳೂರು: ಪತ್ನಿಯನ್ನು ಕೊಲೆ ಮಾಡಿದ್ದ ಪತಿಗೆ ಬೆಂಗಳೂರಿನ 46ನೇ ಸಿಸಿಹೆಚ್​ ನ್ಯಾಯಾಲಯವು ಜೀವಾವಧಿ ಶಿಕ್ಷೆ, ಜೊತೆಗೆ 2 ಸಾವಿರ ರೂ. ದಂಡ ವಿಧಿಸಿದೆ.

2013ರಲ್ಲಿ ಅಪರಾಧಿ ಪತಿ ರಾಜೇಶ್, ತನ್ನ​ ಪತ್ನಿ ಶಾರದಾ ಎಂಬವವರನ್ನು ಕೊಲೆ ಮಾಡಿದ್ದ. ಈ ಸಂಬಂಧ ಕುಮಾರಸ್ವಾಮಿ ಲೇಔಟ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಂತರ ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಇದೀಗ 10 ವರ್ಷದ ಬಳಿಕ ಆರೋಪ ಸಾಬೀತಾದ ಹಿನ್ನೆಲೆ ಆತನಿಗೆ ಜೀವಾವಧಿ ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶ ನೀಡಿದೆ.

ಕೊಲೆ ಮಾಡುವುದಕ್ಕೂ ಮೊದಲು ರಾಜೇಶ್​ ಹಾಗೂ ಶಾರದಾ ವಿಚ್ಛೇದನ ಪಡೆದಿದ್ದರು. ಬಳಿಕ ಪತ್ನಿಗೆ ಜೀವನಾಂಶ ನೀಡುವಂತೆ ನ್ಯಾಯಾಲಯ ರಾಜೇಶ್​ನಿಗೆ ಆದೇಶಿಸಿತ್ತು.

ಜೀವನಾಂಶ ನೀಡದ ರಾಜೇಶ್​ ಜೈಲು ಪಾಲಾಗಿದ್ದ. ಜೈಲಿನಿಂದ ಬಿಡುಗಡೆಯಾದ ಬಳಿಕ ರಾಜೇಶ್ ಚಾಕುವಿನಿಂದ 52 ಬಾರಿ ಇರಿದು ಪತ್ನಿಯನ್ನು ಕೊಲೆ ಮಾಡಿದ್ದ. ಬಳಿಕ ಪೊಲೀಸರು ಆರೋಪಿಯನ್ನು ಬಂಧಿಸಿ, ತನಿಖೆ ನಡೆಸಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು. ಇದೀಗ ಹತ್ತು ವರ್ಷದ ಬಳಿಕ ನ್ಯಾಯಾಲಯವು ಅಪರಾಧಿಗೆ ಜೀವಾವಧಿ ಶಿಕ್ಷೆ ನೀಡಿದೆ.

Join Whatsapp
Exit mobile version