ನವದೆಹಲಿ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಇಡಿಯಿಂದ ಆರೋಪ ಪಟ್ಟಿ ದಾಖಲಾದ ಬೆನ್ನಲ್ಲೇ, 2018 ರಲ್ಲಿ ಡಿಕೆಶಿ ವಿರುದ್ಧ ದಾಖಲಾಗಿರುವ ಹಣ ವರ್ಗಾವಣೆ ಪ್ರಕರಣದಲ್ಲಿ ದೆಹಲಿಯ ನ್ಯಾಯಾಲಯ ಸಮನ್ಸ್ ನೀಡಿದೆ.
ಜುಲೈ 1 ರಂದು ವಿಚಾರಣೆಗೆ ಹಾಜರಾಗುವಂತೆ ವಿಶೇಷ ನ್ಯಾಯಾಧೀಶ ವಿಕಾಸ್ ಧುಲೆ ಡಿಕೆ ಶಿವಕುಮಾರ್ ಅವರಿಗೆ ನಿರ್ದೇಶಿಸಿದ್ದಾರೆ.
ಡಿಕೆ ಶಿವಕುಮಾರ್ ಮತ್ತಿತರರ ವಿರುದ್ಧ ವಿಶೇಷ ಪ್ರಾಸಿಕ್ಯೂಟರ್ ನಿತೇಶ್ ರಾಣಾ ಅವರ ಮೂಲಕ ಇಡಿ ಸಲ್ಲಿಸಿದ ಜಾರ್ಜ್ ಶೀಟ್ ನ್ನು ಸ್ವಯಂ ಪ್ರೇರಿತವಾಗಿ ತೆಗೆದುಕೊಂಡ ನಂತರ ಕೋರ್ಟ್ ಈ ಆದೇಶ ನೀಡಿದೆ.
ಡಿಕೆಶಿಗೆ ಮತ್ತೊಂದು ಸಂಕಷ್ಟ: ಜುಲೈ 1 ರಂದು ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಸಮನ್ಸ್
Prasthutha|