Home ಟಾಪ್ ಸುದ್ದಿಗಳು ವಿಚಾರಣೆಗೆ ಹಾಜರಾಗುವಂತೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್’ಗೆ ಕೋರ್ಟ್ ಸಮನ್ಸ್..!

ವಿಚಾರಣೆಗೆ ಹಾಜರಾಗುವಂತೆ ಸಿದ್ದರಾಮಯ್ಯ, ಡಿಕೆ ಶಿವಕುಮಾರ್’ಗೆ ಕೋರ್ಟ್ ಸಮನ್ಸ್..!

ಬೆಂಗಳೂರು: ರಾಹುಲ್ ಗಾಂಧಿ ವಿರುದ್ದ ಇಡಿ ವಿಚಾರಣೆ ಖಂಡಿಸಿ ಪ್ರತಿಭಟನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಕೋರ್ಟ್ ಸಮನ್ಸ್ ನೀಡಿದೆ.


ಆಗಸ್ಟ್ 29ರಂದು ಖುದ್ದು ಹಾಜರಾಗುವಂತೆ ಸಿಎಂ, ಡಿಸಿಎಂಗೆ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ ಸಮನ್ಸ್ ಜಾರಿ ಮಾಡಿದೆ.


ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಹೆಸರಿನಲ್ಲಿ ಹಣ ಅಕ್ರಮ ವರ್ಗಾವಣೆ ಮಾಡಲಾಗಿದೆ ಎಂದು ಆರೋಪಿಸಲಾದ ಪ್ರಕರಣದಲ್ಲಿ ಇಡಿ (ಜಾರಿ ನಿರ್ದೇಶನಾಲಯ) ರಾಹುಲ್ ಗಾಂಧಿಗೆ ಅನಗತ್ಯವಾಗಿ ಕಿರುಕುಳ ನೀಡುತ್ತಿದೆ ಎಂದು ಆರೋಪಿಸಿ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರು ಬೆಂಗಳೂರಿನಲ್ಲಿ ಪ್ರತಿಭಟನೆ ಮಾಡಿದ್ದರು. ಕಾನೂನುಬಾಹಿರವಾಗಿ ಪ್ರತಿಭಟನೆ ಮಾಡಿದ್ದಾರೆಂದು 2022ರಲ್ಲಿ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣೆಯಲ್ಲಿ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ವಿರುದ್ಧ ದೂರು ದಾಖಲಾಗಿತ್ತು.

Join Whatsapp
Exit mobile version