ಸೌಜನ್ಯ ಪ್ರಕರಣ | ನ್ಯಾಯಾಲಯದ ನಿರ್ಧಾರದಂತೆ ಕ್ರಮ: ಪರಮೇಶ್ವರ್‌

Prasthutha|

ಅರಸೀಕೆರೆ: ಸೌಜನ್ಯಾ ಕೊಲೆ ಪ್ರಕರಣವನ್ನು ಮರು ತನಿಖೆ ಆಗಬೇಕು ಎನ್ನುತ್ತಿರುವವರು ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಬೇಕು. ಕೋರ್ಟ್‌ ಏನು ನಿರ್ದೇಶನ ನೀಡುತ್ತದೆಯೋ ಅದನ್ನು ಆಧರಿಸಿ ಸರಕಾರ ಕ್ರಮ ಕೈಗೊಳ್ಳುತ್ತದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್‌ ಹೇಳಿದ್ದಾರೆ.

- Advertisement -

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರಕಾರ ನೇರವಾಗಿ ಮರುತನಿಖೆ ಮಾಡುವಂತಿಲ್ಲ. ಆದರೆ ನ್ಯಾಯಾಲಯ ಸರಕಾರಕ್ಕೆ ಸೂಕ್ತ ನಿರ್ದೇಶನ ನೀಡಿದಲ್ಲಿ ಮರುತನಿಖೆ ಮಾಡಬಹುದು ಎಂದರು.

ಇನ್ನು ಈಗ ಸೌಜನ್ಯಾ ಕೊಲೆ ಪ್ರಕರಣದಲ್ಲಿ ಸರಕಾರದ ನಿಲುವಿನ ಪ್ರಶ್ನೆ ಅಲ್ಲ. ಈಗ ಮರು ತನಿಖೆ ಆಗಬೇಕು ಎನ್ನುತ್ತಿರುವವರು ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಬೇಕು. ಕೋರ್ಟ್‌ ಏನು ನಿರ್ದೇಶನ ನೀಡುತ್ತದೆಯೋ ಅದನ್ನು ಆಧರಿಸಿ ಸರಕಾರ ಕ್ರಮ ಕೈಗೊಳ್ಳುತ್ತದೆ. ಕೋರ್ಟ್‌ ಮರು ತನಿಖೆ ಮಾಡಿ ಎಂದು ನಿರ್ದೇಶಿಸಿದರೆ ಸರಕಾರ ಮರು ತನಿಖೆ ಮಾಡಬಹುದು. ಅದನ್ನು ಬಿಟ್ಟು ಈಗ ಸರಕಾರ ಏನೂ ಮಾಡಲಾಗದು ಎಂದಿದ್ದಾರೆ.