ಹೊಸದಿಲ್ಲಿ: ಅಯೋಧ್ಯೆ-ಬಾಬರಿ ಮಸೀದಿ ತೀರ್ಪನ್ನು ಎರಡೂ ಕಡೆಯವರು ಒಪ್ಪಿಕೊಂಡಿದ್ದರಿಂದ ಸುಪ್ರೀಂ ಕೋರ್ಟ್ ನೀಡಿದ ತೀರ್ಪು ಸರಿಯಾಗಿದೆ ಎಂದು ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಹೇಳಿದ್ದಾರೆ.
ಸಲ್ಮಾನ್ ಖುರ್ಷಿದ್ ಅವರ ‘ಸನ್ ರೈಸ್ ಓವರ್ ಅಯೋಧ್ಯೆ’ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಅವರು, 1992ರಲ್ಲಿ ಆರಂಭವಾದ ಕಥೆಯು ಸುಪ್ರೀಂ ಕೋರ್ಟ್ ತೀರ್ಪಿನ ದಿನವಾದ ನವೆಂಬರ್ 9, 2019ರಂದು ಸಂಪೂರ್ಣವಾಗಿ ಅನಿರೀಕ್ಷಿತ ಅಂತ್ಯ ಕಂಡಿತು ಎಂದರು.
ನವೆಂಬರ್ 2019 ರಲ್ಲಿ ನೀಡಿರುವ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ವಿವಾದಿತ ಸ್ಥಳವನ್ನು ಹಿಂದೂಗಳಿಗೆ ನೀಡಿತ್ತು. ಮಸೀದಿ ನಿರ್ಮಿಸಲು ಪರ್ಯಾಯ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವಂತೆ ನ್ಯಾಯಾಲಯವು ಸರಕಾರಕ್ಕೆ ಆದೇಶ ನೀಡಿತ್ತು.