ಹೊಸ ರೂಪಾಂತರಿತ ಕೊರೊನ ವೈರಸ್ ಭೀತಿ | ರಾಜ್ಯದಲ್ಲಿ ಇಂದಿನಿಂದಲೇ ನೈಟ್ ಕರ್ಫ್ಯೂ ಜಾರಿ

Prasthutha|

ಬೆಂಗಳೂರು : ಹೊಸ ರೂಪಾಂತರಿತ ಕೋವಿಡ್ 19 ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದು ರಾತ್ರಿಯಿಂದಲೇ ಜನವರಿ 2ರವರೆಗೆ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.

ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇಂದು ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ. ಜನವರಿ 2ರವರೆಗೆ ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ. ಕೋವಿಡ್ 19 ಹೊಸ ರೂಪಾಂತರದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

- Advertisement -

ಇಂಗ್ಲೆಂಡ್ ನಿಂದ ಬರುವವರಿಗೆ ಕಡ್ಡಾಯವಾಗಿ ಕೋವಿಡ್ 19 ಪರೀಕ್ಷೆ ನಡೆಸಲಾಗುತ್ತದೆ. ಈಗಾಗಲೇ ರಾಜ್ಯಕ್ಕೆ ಇಂಗ್ಲೆಂಡ್ ನಿಂದ ಬಂದಿರುವಂತವರನ್ನು ಪತ್ತೆ ಹಚ್ಚಿ, ಅವರನ್ನು ಕೋವಿಡ್-19 ಸೋಂಕು ಪತ್ತೆಗಾಗಿ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಆ ಮೂಲಕ ಹೊಸ ಕೊರೋನಾ ರೂಪಾಂತರದ ಅಲೆಯ ಬಗ್ಗೆ ಪರೀಕ್ಷೆ ನಡೆಸಲಾಗುತ್ತಿದೆ. ಆ ಬಗ್ಗೆ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ದು ಯಡಿಯೂರಪ್ಪ ತಿಳಿಸಿದ್ದಾರೆ.

- Advertisement -