ಹೊಸ ವರ್ಷಾಚರಣೆಗೆ ಬ್ರೇಕ್ | ಇಂದು ಮಧ್ಯಾಹ್ನ 12 ಗಂಟೆಯಿಂದ ನಾಳೆ ಬೆಳಗ್ಗೆ 6 ಗಂಟೆ ವರೆಗೆ ರಾಜ್ಯಾದ್ಯಂತ ನಿಷೇಧಾಜ್ಞೆ : ಸಿಎಂ ಘೋಷಣೆ

Prasthutha|

ಬೆಂಗಳೂರು : ಹೊಸ ವರ್ಷಾಚರಣೆಗೆ ಬ್ರೇಕ್ ಹಾಕಲು ಮುಂದಾಗಿರುವ ರಾಜ್ಯ ಸರಕಾರ, ಇಂದು ಮಧ್ಯಾಹ್ನ 12 ಗಂಟೆಯಿಂದ ನಾಳೆ ಮುಂಜಾನೆ 6 ಗಂಟೆ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಬ್ರಿಟನ್ ನಲ್ಲಿ ಕಾಣಿಸಿಕೊಂಡ ಹೊಸ ರೂಪಾಂತರಿತ ಕೊರೊನ ವೈರಸ್ ಸೋಂಕು ತಡೆಯುವ ಸಲುವಾಗಿ ಕಠಿಣ ನಿಯಮಗಳನ್ನು ಪಾಲಿಸುವಂತೆ ರಾಜ್ಯದ ಜನತೆಗೆ ಸಿಎಂ ಯಡಿಯೂರಪ್ಪ ಮನವಿ ಮಾಡಿದ್ದಾರೆ.

- Advertisement -

ಬ್ರಿಟನ್ ಕೊರೊನ ವೈರಸ್ ಆತಂಕದ ಹಿನ್ನೆಲೆಯಲ್ಲಿ ಇಂದು (ಗುರುವಾರ) ಮಧ್ಯಾಹ್ನ 12 ಗಂಟೆಯಿಂದ ನಾಳೆ ಮುಂಜಾನೆ 6 ಗಂಟೆ ವರೆಗೆ ನಿಷೇಧಾಜ್ಞೆ ಜಾರಿಯಾಗಿದೆ. ಇದಕ್ಕೆ ಎಲ್ಲರು ಸಹಕರಿಸಬೇಕು. ಹೊಸ ವರ್ಷ ಎಲ್ಲರಿಗೂ ನೆಮ್ಮದಿ ಮತ್ತು ಶಾಂತಿ ತರಲಿ ಎಂದು ಶುಭ ಹಾರೈಸಿದ್ದಾರೆ.



Join Whatsapp