ರಿಯಾದ್: ಡಿಸೆಂಬರ್ 30 ರ ಗುರುವಾರ ಬೆಳಿಗ್ಗೆ 7 ರಿಂದ ಎಲ್ಲಾ ಒಳಾಂಗಣ ಮತ್ತು ಹೊರಾಂಗಣ ಕಾರ್ಯಕ್ರಮ, ಚಟುವಟಿಕೆಗಳಲ್ಲಿ ಮಾಸ್ಕ್ ಮತ್ತು ಸಾಮಾಜಿಕ ಅಂತರ ಕಡ್ಡಾಯವಾಗಿದೆ ಎಂದು ಸೌದಿ ಅರೇಬಿಯಾ ತನ್ನ ನೂತನ ಮಾರ್ಗಸೂಚಿಯಲ್ಲಿ ಉಲ್ಲೇಖಿಸಿದೆ.
ಸೌದಿ ಅರೇಬಿಯಾದ ಆಂತರಿಕ ಸಚಿವಾಲಯದ ಅಧಿಕೃತ ಮೂಲ ಕೋವಿಡ್ 19 ಪ್ರಕರಣಗಳ ಸಂಖ್ಯೆಯಲ್ಲಿನ ಹೆಚ್ಚಳ ಮತ್ತು ವೈರಸ್ ರೂಪಂತರಿ ಓಮಿಕ್ರಾನ್ ಭೀತಿಯಿಂದಾಗಿ ಅರೋಗ್ಯ ಇಲಾಖೆಯ ಅಧಿಕಾರಿಗಳು ಈ ನಿರ್ಧಾರ ಕೈಗೊಂಡಿರುವುದಾಗಿ ಸೌದಿ ಸುದ್ದಿಸಂಸ್ಥೆ ವರದಿ ಮಾಡಿದೆ.
ಸ್ಥಳೀಯ ಮತ್ತು ಜಾಗತಿಕ ಸ್ಥಿತಿಗತಿಯ ಆಧಾರದಲ್ಲಿ ಎಲ್ಲಾ ಕಾರ್ಯವಿಧಾನಗಳು ಮತ್ತು ಸುರಕ್ಷತಾ ಕ್ರಮಗಳನ್ನು ಅನುಸರಿಸಲು ಸೌದಿ ಪ್ರಾಧಿಕಾರ ಸೂಚಿಸಿದೆ. ಮುನ್ನೆಚ್ಚರಿಕೆ ಕ್ರಮವನ್ನು ಅನುಸರಿಸಲು ವಿಫಲವಾಗುವ ನಿವಾಸಿಗಳಿಗೆ ಭಾರೀ ದಂಡವನ್ನು ವಿಧಿಸಲಾಗುವುದೆಂದು ಸೌದಿ ಆರೋಗ್ಯ ಪ್ರಾಧಿಕಾರ ಘೋಷಿಸಿದೆ.