ನವದೆಹಲಿ : ಕೋವಿಡ್ 19 ಲಸಿಕೆಯನ್ನು ದೇಶಾದ್ಯಂತ ಉಚಿತವಾಗಿ ವಿತರಿಸಲಾಗುವುದು ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಹೇಳಿದ್ದಾರೆ.
ಲಸಿಕೆ ನೀಡುವ ಪ್ರಕ್ರಿಯೆಯ ಅಣಕು ಕಾರ್ಯಾಚರಣೆಗೆ ದೆಹಲಿಯಲ್ಲಿ ಸಿದ್ಧತೆ ಪರಿಶೀಲಿಸಿದ ಬಳಿಕ ಮಾತನಾಡಿದ ಅವರು ಈ ವಿಷಯ ತಿಳಿಸಿದ್ದಾರೆ.
“ದೆಹಲಿಯಲ್ಲಿ ಮಾತ್ರವಲ್ಲ. ಲಸಿಕೆ ಇಡೀ ದೇಶದಲ್ಲಿ ಉಚಿತವಾಗಿ ವಿತರಿಸಲಾಗುವುದು” ಎಂದು ಅವರು ಹೇಳಿದ್ದಾರೆ. ಕೋವಿಡ್ 19 ಲಸಿಕೆಯನ್ನು ಉಚಿತವಾಗಿ ವಿತರಿಸಲಾಗುತ್ತದೆಯೇ? ಎಂದು ಕೇಳಲಾದ ಪ್ರಶ್ನೆಗೆ ಅವರು ಉತ್ತರಿಸಿದ್ದಾರೆ.
ಮೊದಲ ಹಂತದಲ್ಲಿ 3 ಕೋಟಿ ಕೋವಿಡ್ 19 ವಾರಿಯರ್ಸ್ ಗೆ ಲಸಿಕೆ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ. ಶೀಘ್ರದಲ್ಲೇ ಭಾರತದಲ್ಲಿ ಕೋವಿಡ್ 19 ಲಸಿಕೆ ನೀಡುವುದಕ್ಕೆ ಆರಂಭಿಸಲಾಗುತ್ತದೆ ಎಂಬ ವರದಿಗಳಿವೆ.