ಕೋವಿಡ್ 4ನೇ ಅಲೆ: ಕೇರಳದಲ್ಲಿ ಮಾಸ್ಕ್ ಕಡ್ಡಾಯಗೊಳಿಸಿದ ಸರಕಾರ

Prasthutha|

- Advertisement -

ತಿರುವನಂತಪುರಂ: ದೇಶಾದ್ಯಂತ ಕೋವಿಡ್ 4ನೇ ಅಲೆ ಭೀತಿಯುಂಟು ಮಾಡುತ್ತಿರುವಾಗಲೇ ಕೇರಳದಲ್ಲಿ ಮಾಸ್ಕ್ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ಸಭೆ ಬೆನ್ನಲ್ಲೆ ಕೇರಳದಲ್ಲಿ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯವಾಗಿ ಧರಿಸಬೇಕು. ಕೆಲಸದ ಸ್ಥಳಗಳಲ್ಲೂ, ಪ್ರಯಾಣದ ವೇಳೆಯೂ ಮಾಸ್ಕ್ ಧರಿಸಲು ಸೂಚನೆ ನೀಡಲಾಗಿದೆ. ಒಂದು ವೇಳೆ ಮಾಸ್ಕ್ ಧರಿಸದಿದ್ದರೆ ದಂಡ ವಿಧಿಸಬೇಕೆಂದು ಇದೇ ವೇಳೆ ಸರ್ಕಾರ ತನ್ನ ಆದೇಶದಲ್ಲಿ ಸ್ಪಷ್ಟಪಡಿಸಿದೆ. ಈ ಮೂಲಕ ಕೊವೀಡ್ ನಿಯಮ ಉಲ್ಲಂಘನೆ ಶಿಕ್ಷಾರ್ಹ ಅಪರಾಧ ಎಂದು ಕೇರಳ ಸರ್ಕಾರ ಎಚ್ಚರಿಕೆ ನೀಡಿದೆ.

- Advertisement -

ಕೋವಿಡ್ 4 ನೇ ಅಲೆ ವ್ಯಾಪಕಗೊಳ್ಳಬಹುದೆಂಬ ಭೀತಿಯ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ. ಇಂದಿನಿಂದಲೇ ಪೊಲೀಸರು ಮಾಸ್ಕ್ ಧರಿಸದವರನ್ನು ಪತ್ತೆ ಹಚ್ಚಿ ದಂಡ ವಿಧಿಸಲಿದ್ದಾರೆ ಎಂದು ತಿಳಿದುಬಂದಿದೆ.



Join Whatsapp