ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 4 ಲಕ್ಷ ಕೊರೊನಾ ಸೋಂಕು ದೃಢ ; 3523 ಮಂದಿ ಸಾವು

Prasthutha|

ದೆಹಲಿ : ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 4,01,993 ಹೊಸ ಕೋವಿಡ್-19 ಪ್ರಕರಣಗಳು ಹಾಗೂ 3,523 ಸಾವಿನ ಪ್ರಕರಣಗಳು ವರದಿಯಾಗುವುದರೊಂದಿಗೆ ಭಾರತ ಜಗತ್ತಿನಲ್ಲೇ ಕೊರೊನಾ ಸೋಂಕು ಉಲ್ಬಣಗೊಂಡ ದೇಶಗಳ ಸಾಲಿನಲ್ಲಿ ಮುಂಚೂಣಿಯಲ್ಲಿದೆ.

ಇದರೊಂದಿಗೆ ದೇಶದಲ್ಲಿ ಕೊರೋನಾವೈರಸ್ ಸೋಂಕಿಗೆ ಒಳಗಾದವರ ಒಟ್ಟು ಸಂಖ್ಯೆ 1,91,64,969 ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಹೇಳಿದೆ. ಇದೇ ಅವಧಿಯಲ್ಲಿ 3,523 ಸಾವುಗಳು ವರದಿಯಾಗುವುದರೊಂದಿಗೆ ಒಟ್ಟು ಸಾವಿನ ಸಂಖ್ಯೆ 2,11,853ಕ್ಕೆ ತಲುಪಿದೆ. ಸಾಂಕ್ರಾಮಿಕ ರೋಗ ಉಲ್ಬಣವಾದ ನಂತರ ದೇಶದಲ್ಲಿ 1 ಕೋಟಿ 56 ಲಕ್ಷಕ್ಕೂ ಹೆಚ್ಚು ರೋಗಿಗಳು ಚೇತರಿಸಿಕೊಂಡಿದ್ದಾರೆ.

- Advertisement -

ಮುಂದಿನ ವಾರ ಮೇ 3 ಮತ್ತು 5 ರ ನಡುವೆ ಭಾರತದಲ್ಲಿ ಕೊರೋನವೈರಸ್ ಪ್ರಕರಣಗಳು ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ಸೋಂಕಿನ ಹಾದಿಯನ್ನು ಗಮನಿಸಲು ಸರ್ಕಾರ ನೇಮಿಸಿರುವ ವಿಜ್ಞಾನಿಗಳ ಸಮಿತಿಯ ಮುಖ್ಯಸ್ಥ ಎಂ ವಿದ್ಯಾಸಾಗರ್ ತಿಳಿಸಿದ್ದಾರೆ.

- Advertisement -