ಭಾರತದಲ್ಲಿ ಕೊರೋನಾ ರಣಕೇಕೆ : ಒಂದೇ ದಿನ 2.34 ಲಕ್ಷ ಪ್ರಕರಣ, 1,341 ಮಂದಿ ಸಾವು !

Prasthutha|

ನವದೆಹಲಿ: ಭಾರತದಲ್ಲಿ ಕೊರೋನಾ ವೈರಸ್ ಅಬ್ಬರ ಮುಂದುವರೆದಿದೆ. ಸತತ 3ನೇ ದಿನವೂ 2 ಲಕ್ಷಕ್ಕಿಂತಲೂ ಹೆಚ್ಚು ಹೊಸ ಪ್ರಕರಣಗಳು ಪತ್ತೆಯಾಗಿವೆ. ಶುಕ್ರವಾರ ಬೆಳಿಗ್ಗೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ದೇಶದಾದ್ಯಂತ ಒಟ್ಟಾರೆ 2,34,692 ಹೊಸ ಕೊರೋನಾ ಪ್ರಕರಣಗಳು ವರದಿಯಾಗಿದೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 1,45,26,609ಕ್ಕೆ ಏರಿಕೆಯಾಗಿದೆ.

- Advertisement -

ಒಂದೇ ದಿನ 1,341 ಮಂದಿ ಸಾವನ್ನಪ್ಪಿದ್ದು, ಒಟ್ಟು ಸಾವಿನ ಸಂಖ್ಯೆ 1,75,649ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ದಾಖಲೆ ಮಟ್ಟದಲ್ಲಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 16,79,740ಕ್ಕೆ ಏರಿಕೆಯಾಗಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 1,23,354 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ 1,26,71,220ಕ್ಕೆ ತಲುಪಿದೆ. ದೇಶದಲ್ಲಿ ಒಂದೇ ದಿನದಲ್ಲಿ 14,95,397 ಮಂದಿಯನ್ನು ಕೋವಿಡ್ ಪರೀಕ್ಷೆಗೊಳಪಡಿಸಲಾಗಿದ್ದು, ಈವರೆಗೂ ದೇಶದಲ್ಲಿ 26,34,76,625 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಅಧಿಕೃತ ಮುದ್ರೆ ಬಿದ್ದಿತ್ತು. ಇದರಂತೆ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 11,99,37,641 ಮಂದಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ.

Join Whatsapp