ದಕ್ಷಿಣ ಕನ್ನಡ : ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಇಳಿಕೆ ಕಂಡುಬರುತ್ತಿದ್ದರೂ , ಜಿಲ್ಲಾವಾರು ಪ್ರಮಾಣದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತ್ರ ಸೋಂಕು ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 1006 ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, ಮಹಾಮಾರಿಗೆ ಜಿಲ್ಲೆಯ ಹದಿನೈದು ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈವರೆಗೆ ಒಟ್ಟು ಬಲಿಯಾದವರ ಸಂಖ್ಯೆ 1024ಕ್ಕೆ ಏರಿಕೆ ಕಂಡಿದೆ.
ಅದೇ ರೀತಿ ಇಂದು 665 ಮಂದಿ ಸೋಂಕಿತರು ಕೋವಿಡ್ ನಿಂದ ಚೇತರಿಸಿಕೊಂಡು ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಸದ್ಯ 6,931 ಆಕ್ವೀವ್ ಕೇಸ್ ಗಳಿದ್ದು, ಈವರೆಗೆ ಒಟ್ಟು 87,350 ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದೆ. ಇಂದು ಒಂದೇ ದಿನ ಸೋಂಕು ಸಾವಿರದ ಗಡಿ ದಾಟುವುದರೊಂದಿಗೆ ಜಿಲ್ಲೆಯ ಇಂದಿನ ಪಾಸಿಟಿವಿಟಿ ದರ 10.07% ಏರಿಕೆ ಕಂಡಿದೆ.