ರಾಜ್ಯದಲ್ಲಿ ಕೊರೋನಾ ಹೆಚ್ಚಳ: ಇಂದು ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ

Prasthutha|

- Advertisement -

ಬೆಂಗಳೂರು: ಕೇರಳ ಸೇರಿದಂತೆ ದೇಶದ ಕೆಲವು ರಾಜ್ಯಗಳಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದು, ಕರ್ನಾಟಕದಲ್ಲಿ ಈವರೆಗೆ 92 ಪ್ರಕರಣಗಳು ಪತ್ತೆಯಾಗಿವೆ. ಹೀಗಾಗಿ ಇಂದು ಮಧ್ಯಾಹ್ನ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಯಲಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ , ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಭೆಯಲ್ಲಿ ಭಾಗಿಯಾಗಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಮುಖ್ಯಸ್ಥರು, ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ತಜ್ಞರ ಜೊತೆ ಚರ್ಚೆ ನಡೆಸಲಿದ್ದಾರೆ.



Join Whatsapp