ಮಂಗಳೂರು : ರಾಜ್ಯವೇ ಕೊರೋನಾದಿಂದ ತತ್ತರಿಸುತ್ತಿರುವ ಹಿನ್ನೆಲೆಯಲ್ಲಿ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ಲಾಕ್ ಡೌನ್ ಜಾರಿಗೊಳಿಸಲಾಗಿದ್ದು, ಇನ್ನೆ ರಾತ್ರಿ 9 ರಿಂದ ಮೇ 12 ರ ವರೆಗೆ ಇಡೀ ರಾಜ್ಯವೇ ಬಂದ್ ಆಚರಿಸಲಿದೆ.
ರಾಜ್ಯಾದ್ಯಂತ ಲಾಕ್ ಡೌನ್ ಹಿನ್ನೆಲೆಯಲ್ಲಿ ಮಂಗಳೂರು ಸಂಪೂರ್ಣ ಸ್ತಬ್ಧಗೊಂಡಿದೆ. ಮುಂಜಾನೆ 6ರಿಂದ 10ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಲಾಗಿದ್ದು, ನಗರದ ಸೆಂಟ್ರಲ್ ಮಾರ್ಕೆಟ್ ನಲ್ಲಿ ಜನರು ಅಗತ್ಯ ವಸ್ತುಗಳ ಖರೀದಿ ಮಾಡಿದ್ದಾರೆ.
ಕಮಿಷನರೇಟ್ ವ್ಯಾಪ್ತಿಯಲ್ಲಿ 54 ಚೆಕ್ ಪೋಸ್ಟ್ ಗಳಲ್ಲಿ ತಪಾಸಣೆಗೆ ಸಿದ್ಧತೆ ನಡೆಸಿದ ಪೊಲೀಸ್ ಸಿಬ್ಬಂದಿಗಳು ಬೆಳಗ್ಗೆ 10ರ ಬಳಿಕ ಅನಗತ್ಯ ಸಂಚಾರಕ್ಕೆ ನಿರ್ಬಂಧ ಹೇರಿದ್ದಾರೆ.
ಕಮಿಷನರೇಟ್ ವ್ಯಾಪ್ತಿಯಲ್ಲಿ ಒಂದು ಸಾವಿರಾರಕ್ಕೂ ಅಧಿಕ ಪೊಲೀಸ್ ನಿಯೋಜನೆಗೊಳಿಸಲಾಗಿದ್ದು, ಎಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2 ರಿಂದ 3 ಮೊಬೈಲ್ ಸ್ಕ್ವಾಡ್ ನಿಯೋಜನೆ ಮಾಡಲಾಗಿದೆ.