Home ಟಾಪ್ ಸುದ್ದಿಗಳು ಕೋವಿಡ್ ಕರ್ಫ್ಯೂ: 10 ದಿನದ ಬಳಿಕ ಮುಂದಿನ ನಿರ್ಧಾರ; ಡಾ.ಕೆ. ಸುಧಾಕರ್‌

ಕೋವಿಡ್ ಕರ್ಫ್ಯೂ: 10 ದಿನದ ಬಳಿಕ ಮುಂದಿನ ನಿರ್ಧಾರ; ಡಾ.ಕೆ. ಸುಧಾಕರ್‌

ಬೆಂಗಳೂರು: ಕೋವಿಡ್‌ ನಿಯಂತ್ರಣಕ್ಕಾಗಿ ರಾಜ್ಯದಲ್ಲಿ ರಾತ್ರಿ ಕರ್ಫ್ಯೂ ಜಾರಿಗೊಳಿಸಿರುವ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ. ಹತ್ತು ದಿನಗಳ ಬಳಿಕವೇ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್‌ ತಿಳಿಸಿದರು. ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ ಅವರು, ತಜ್ಞರ ಅಭಿಪ್ರಾಯದ ಆಧಾರದಲ್ಲೇ ರಾತ್ರಿ ಕರ್ಫ್ಯೂ ಜಾರಿಗೊಳಿಸುವ ತೀರ್ಮಾನ ಮಾಡಲಾಗಿದೆ. ಹತ್ತು ದಿನಗಳವರೆಗೂ ಈ ವ್ಯವಸ್ಥೆ ಮುಂದುವರಿಯಲಿದೆ. ಎಲ್ಲ ಸಾಧಕ ಬಾಧಕಗಳನ್ನು ನೋಡಿಕೊಂಡೇ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

ಹತ್ತು ದಿನಗಳ ಕಾಲ ರಾತ್ರಿ ಕರ್ಫ್ಯೂ ಹೇಗಿರಲಿದೆ ಎಂಬ ಮಾರ್ಗಸೂಚಿಯನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ. ಉತ್ತಮ ರೀತಿಯಲ್ಲಿ ಮಾರ್ಗಸೂಚಿ ಪಾಲಿಸುವ ಮೂಲಕ ಜನರು ಸಂಪೂರ್ಣ ಸಹಕಾರ ನೀಡಬೇಕು. ಹತ್ತು ದಿನಗಳ ಬಳಿಕ ಮುಖ್ಯಮಂತ್ರಿಯವರ ನೇತೃತ್ವದಲ್ಲಿ ತಜ್ಞರ ಜತೆ ಚರ್ಚಿಸಿ ಮುಂದಿನ ತೀರ್ಮಾನಕ್ಕೆ ಬರಲಾಗುವುದು ಎಂದು ಹೇಳಿದರು.

ಕೋವಿಡ್‌ ಎರಡನೇ ಅಲೆಯಲ್ಲಿ ಏನೆಲ್ಲಾ ಆಗಿದೆ ಎಂಬುದನ್ನು ಜನರು ಅರಿಯಬೇಕು. ಯಾವ ಕಾರಣಕ್ಕಾಗಿ ಆಗ ಲಾಕ್‌ಡೌನ್‌ ಅನಿರ್ವಾಯವಾಗಿತ್ತು ಎಂಬುದನ್ನೂ ತಿಳಿಯಬೇಕು. ರಾತ್ರಿ ಕರ್ಫ್ಯೂ ಜಾರಿಗೆ ಪದೇ ಪದೇ ವಿರೋಧ ಮಾಡುವುದು ಸರಿಯಲ್ಲ ಎಂದು ಪ್ರತಿಕ್ರಿಯಿಸಿದರು.

ನಮ್ಮ ಯೂಟ್ಯೂಬ್ ಚಾನೆಲನ್ನು Subscribe ಮಾಡಿ : Prasthutha News

Join Whatsapp
Exit mobile version