ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಆತಂಕ : ಹೆಚ್ಚುತ್ತಿದೆ ಸಾವಿನ ಸಂಖ್ಯೆ !

Prasthutha|

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ದಿನದಿಂದ ದಿನಕ್ಕೆ ತನ್ನ ಕಬಂಧ ಬಾಹುಗಳನ್ನು ಗಟ್ಟಿಗೊಳಿಸುತ್ತಲೇ ಸಾಗಿದೆ. ಜಿಲ್ಲೆಯ ದೈನಂದಿನ ಸಾವಿನ ಸಂಖ್ಯೆಯಲ್ಲೂ ಗಣನೀಯವಾಗಿ ಏರಿಕೆಯಾಗಿದೆ. ಇಂದು ಜಿಲ್ಲೆಯಲ್ಲಿ ಒಟ್ಟು 9 ಮಂದಿ ಕೋವಿಡ್ ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಮೃತಪಟ್ಟಿದ್ದಾರೆ. ಆ ಮೂಲಕ ಈವರೆಗೆ ಜಿಲ್ಲೆಯಲ್ಲಿ ಕೋವಿಡ್ ನಿಂದಾಗಿ ಮೃತಪಟ್ಟವರ ಸಂಖ್ಯೆ 854ಕ್ಕೇರಿದಂತಾಗಿದೆ.

- Advertisement -

ಜಿಲ್ಲೆಯಲ್ಲಿ ಇಂದು 913 ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದೆ. ಇದೇ ವೇಳೆ 927 ಮಂದಿ ಕೋವಿಡ್ ನಿಂದ ಇಂದು ಗುಣಮುಖರಾಗಿ ಮನೆ ಸೇರಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 69,440 ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು, ಸದ್ಯಕ್ಕೆ ಒಟ್ಟು ೧೦,೩೮೪ ಸಕ್ರಿಯ ಪ್ರಕರಣಗಳಿದ್ದು, ಸೋಂಕಿತರು ಜಿಲ್ಲೆಯ ವಿವಿಧ  ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.



Join Whatsapp