ಮಂಡ್ಯ : ಕೊರೋನಾ ಸೋಂಕಿತನೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಸರಕಾರಿ ಆಸ್ಪತ್ರೆ ಆವರಣದಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಅರಕೆರೆ ಗ್ರಾಮದ ಜೈ ಕುಮಾರ್ ಎಂದು ಗುರುತಿಸಲಾಗಿದೆ. ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಜೈ ಕುಮಾರ್ ಅನ್ನು ಏಪ್ರಿಲ್ 21ರಂದು ಚಿಕಿತ್ಸೆಗಾಗಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇಂದು ಬೆಳಿಗ್ಗೆ ಆಸ್ಪತ್ರೆಯ ಆವರಣದಲ್ಲಿರುವ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.
ಆಸ್ಪತ್ರೆ ಆವರಣದಲ್ಲೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿದ ಶ್ರೀರಂಗ ಪಟ್ಟಣ ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು, ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದ್ದಾರೆ.