ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಗೆ ಕೋವಿಡ್ ಸೋಂಕು

Prasthutha|

►ಎರಡು ದಿವಸಗಳ ಹಿಂದೆಯಷ್ಟೇ ಕುಂಭಮೇಳದಲ್ಲಿ ಭಾಗವಹಿಸಿದ್ದರು

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಎರಡು ದಿವಸಗಳ ಹಿಂದೆ ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯುತ್ತಿರುವ ಕುಂಭಮೇಳದಲ್ಲಿ ಭಾಗವಹಿಸಿದ್ದು, ಇದೀಗ ಅವರಿಗೆ ಕೊರೋನಾ ದೃಢಪಟ್ಟಿದೆ ಎಂದು ತಿಳಿದುಬಂದಿದೆ.

- Advertisement -

 “ನನ್ನ ಕೊರೊನಾ ಪರೀಕ್ಷಾ ವರದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಸದ್ಯ ನಾನು ಮನೆಯಲ್ಲಿಯೇ ಐಸೋಲೇಟ್ ಆಗಿ ಚಿಕಿತ್ಸೆಯನ್ನು ಪಡೆಯುತ್ತಿದ್ದೇನೆ. ಕಳೆದ ಕೆಲವು ದಿನಗಳಿಂದ ನನ್ನ ಸಂಪರ್ಕಕ್ಕೆ ಬಂದವರು ಕಡ್ಡಾಯವಾಗಿ ಕೊರೊನಾ ಸೋಂಕು ಪರೀಕ್ಷೆ ಮಾಡಿಸಿಕೊಂಡು ಸ್ವಲ್ಪ ದಿನಗಳ ಕಾಲ ಮನೆಯಲ್ಲೇ ಪ್ರತ್ಯೇಕವಾಗಿರಿ” ಎಂದು ಅಖಿಲೇಶ್ ಯಾದವ್ ಟ್ವೀಟ್ ಮಾಡಿದ್ದಾರೆ.

ಕೊರೋನಾ ಸ್ಪ್ರೆಡರ್ ಎಂದೇ ಬಿಂಬಿಸಲಾಗುತ್ತಿರುವ ಕುಂಭಮೇಳದ ‘ಶಾಹಿ ಸ್ನಾನ’ದ ಸಂದರ್ಭದಲ್ಲಿ ಭಕ್ತರು ಹರಿದ್ವಾರದ ಗಂಗಾದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ. ಇದರಲ್ಲಿ ಲಕ್ಷಾಂತರ ಜನರು ಭಾಗವಹಿಸಿದ್ದಾರೆ.

ಕುಂಭ ಮೇಳದಲ್ಲಿ ಭಾಗವಹಿಸಿದ್ದ ಅಖಿಲೇಶ್ ಯಾದವ್  ಅವರು ಅಖರಾ ಪರಿಷತ್ ಅಧ್ಯಕ್ಷ ಮಹಂತ್ ನರೇಂದ್ರ ಗಿರಿ ಸೇರಿದಂತೆ ವಿವಿಧ ಧಾರ್ಮಿಕ ಮುಖಂಡರನ್ನು ಭೇಟಿಯಾಗಿದ್ದರು. ನಂತರ ಕೊರೋನಾ ಪರೀಕ್ಷೆ ಮಾಡಿಸಿಕೊಂಡಾಗ ಕೊರೋನಾ ದೃಢಪಟ್ಟಿದೆ ಎನ್ನಲಾಗಿದೆ.

- Advertisement -