ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಗೆ ಕೋವಿಡ್ ಪಾಸಿಟಿವ್

Prasthutha|

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳ ಸಂಖ್ಯೆ ಮುಂದುವರೆದಿದ್ದು, ಇದರ ನಡುವೆ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರಿಗೆ ಕೋವಿಡ್-ಪಾಸಿಟಿವ್ ದೃಢಪಟ್ಟಿದೆ.

- Advertisement -

ವೈದ್ಯಕೀಯ ಸಲಹೆಯಂತೆ ಕಮಿಷನರ್ ಪ್ರಸ್ತುತ ಹೋಮ್ ಐಸೋಲೇಶನ್ನಲ್ಲಿದ್ದೇನೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಈ ಕುರಿತು ಟ್ವಿಟ್ ಮೂಲಕ ಪ್ರತಿಕ್ರಿಯಿಸಿದ ಅವರು, ನನಗೆ ಇಂದು ಕೋವಿಡ್ ಪಾಸಿಟಿವ್ ದೃಢಪಟ್ಟಿದ್ದು, ಸೌಮ್ಯ ಲಕ್ಷಣಗಳಿವೆ ಹಾಗೂ ನಾನು ವೈದ್ಯಕೀಯ ಸಲಹೆಯಂತೆ ಹೋಂ ಐಸೋಲೇಷನ್ ನಲ್ಲಿ ಇದ್ದೇನೆ.

ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದಿರುವವರು ಎಚ್ಚರಿಕೆಯಿಂದ ಇರುವಂತೆ ಹಾಗೂ ಅಗತ್ಯ ಬಿದ್ದಲ್ಲಿ ಪರೀಕ್ಷೆಗೆ ಒಳಪಡುವಂತೆ ಮನವಿ ಮಾಡುತ್ತೇನೆ ಮನವಿ ಮಾಡಿದ್ದಾರೆ.



Join Whatsapp