Home ಟಾಪ್ ಸುದ್ದಿಗಳು ನೈಟ್ ಕರ್ಫ್ಯೂ ಹಿಂಪಡೆದ ಉ.ಪ್ರ ಆದಿತ್ಯನಾಥ್ ಸರ್ಕಾರ

ನೈಟ್ ಕರ್ಫ್ಯೂ ಹಿಂಪಡೆದ ಉ.ಪ್ರ ಆದಿತ್ಯನಾಥ್ ಸರ್ಕಾರ

ಲಕ್ನೋ: ಕೋವಿಡ್ – 19 ಗಣನೀಯ ಪ್ರಮಾಣದಲ್ಲಿ ಸುಧಾರಣೆಗೊಂಡ ಹಿನ್ನೆಲೆಯಲ್ಲಿ ರಾತ್ರಿ 11 ಗಂಟೆಯಿಂದ ಬೆಳಿಗ್ಗೆ 6 ರ ವರೆಗೆ ಜಾರಿಯಲ್ಲಿದ್ದ ನೈಟ್ ಕರ್ಫ್ಯೂವನ್ನು ಇಂದಿನಿಂದ ಹಿಂಪಡೆಯಲಾಗಿದೆ ಎಂದು ಉತ್ತರ ಪ್ರದೇಶ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುಖ್ಯಮಂತ್ರಿ ಆದಿತ್ಯನಾಥ್ ಸೂಚನೆಗೆ ಮೇರೆಗೆ ರಾಜ್ಯದಲ್ಲಿ ರಾತ್ರಿ 11 ರಿಂದ ಬೆಳಿಗ್ಗೆ 6 ರ ವರೆಗೆ ಜಾರಿಯಲ್ಲಿದ್ದ ನೈಟ್ ಕರ್ಫ್ಯೂವನ್ನು ಹಿಂಪಡೆಯಲಾಗಿದೆ ಎಂದು ಗೃಹ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಅವನಿಶ್ ಕುಮಾರ್ ಅವಸ್ಥಿ ತಿಳಿಸಿದ್ದಾರೆ.

ಈ ಸಂಬಂಧ ಎಲ್ಲಾ ಸರ್ಕಾರಿ ಅಧಿಕಾರಿಗಳಿಗೆ ಸುತ್ತೋಳೆ ಹೊರಡಿಸಲಾಗಿದೆ ಎಂದು ಅವರು ತಿಳಿಸಿದರು.

ಈ ಮಧ್ಯೆ ರಾಜ್ಯದಲ್ಲಿ ಬುಧವಾರ 11 ನೂತನ ಕೋವಿಡ್ ಪ್ರಕರಣ ಪತ್ತೆಯಾಗಿದ್ದು, 112 ಸಕ್ರಿಯ ಪ್ರಕರಣ ಚಾಲ್ತಿಯಲ್ಲಿದೆ ಎಂದು ಆರೋಗ್ಯ ಇಲಾಖೆಯ ಹಿರಿಯ ಅಧಿಕಾರೊಯೊಬ್ಬರು ಮಾಹಿತಿ ನೀಡಿದ್ದಾರೆ. ಪ್ರಸಕ್ತ ಇದುವರೆಗೆ 16,87,048 ರೋಗಿಗಳು ವೈರಸ್‌ನಿಂದ ಚೇತರಿಸಿಕೊಂಡಿದ್ದಾರೆ ಎಂದು ಅವರು ತಿಳಿಸಿದರು.

Join Whatsapp
Exit mobile version