ಬೆಂಗಳೂರು: ಓಮಿಕ್ರಾನ್ ಸೋಂಕಿನಿಂದ ಚೇತರಿಸಿಕೊಂಡಿದ್ದ ವೈದ್ಯನಿಗೆ ಪ್ರಾಥಮಿಕ ಪರೀಕ್ಷೆಯಲ್ಲಿ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ ಎಂದು ಬಿಬಿಎಂಪಿ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದೇಶದಲ್ಲಿ ಮೊದಲ ಬಾರಿ ಓಮಿಕ್ರಾನ್ ಸೋಂಕು ಕಾಣಿಸಿಕೊಂಡಿದ್ದ ಕರ್ನಾಟಕ ಮೂಲದ ಇಬ್ಬರಲ್ಲಿ ಈ ವೈದ್ಯ ಒಬ್ಬರಾಗಿದ್ದಾರೆ. ಮತ್ತೊಬ್ಬರು ದಕ್ಷಿಣ ಆಫ್ರಿಕಾ ಮೂಲದವರಾಗಿದ್ದು, ಅವರು ಕ್ವಾರಂಟೈನ್ ನಿಯಮ ಉಲ್ಲಂಘಿಸಿ ದುಬೈಗೆ ತೆರಳಿದ್ದಾರೆ.
ಓಮಿಕ್ರಾನ್ ಸೋಂಕಿಗೆ ತುತ್ತಾಗಿದ್ದ ವೈದ್ಯರನ್ನು ಕ್ವಾರಂಟೈನ್ ಅವಧಿ ಮುಗಿದ ಬಳಿಕ ಕೋವಿಡ್ ತಪಾಸಣೆಗೆ ಒಳಪಡಿಸಲಾಗಿತ್ತು. ಸೋಂಕು ಪತ್ತೆಯಾದಾಗಿನಿಂದ ವೈದ್ಯ ಪ್ರತ್ಯೇಕವಾಸದಲ್ಲಿದ್ದರು. ಆದರೆ, ವರದಿ ಪಾಸಿಟಿವ್ ಬಂದಿದೆ ಎಂದು ಬಿಬಿಎಂಪಿ ಅಧಿಕಾರಿ ತಿಳಿಸಿದ್ದಾರೆ.