ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಏರಿಕೆಯಾಗುತ್ತಿರುವ ಕೋವಿಡ್ ಪ್ರಕರಣಗಳು | ಇಂದು 4 ಬಲಿ, 664 ಪಾಸಿಟಿವ್ !

Prasthutha|

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಎರಡನೇ ಅಲೆ ಪ್ರಕರಣಗಳು ನಿಧಾನವಾಗಿ ಏರಿಕೆಯಾಗುತ್ತಿದೆ. ಜಿಲ್ಲಾಡಳಿತದ ಅಂಕಿ ಅಂಶಗಳುದಿನದಿಂದ ದಿನಕ್ಕೆ  ಏರಿಕೆಯಾದ ಕುರಿತು ತಿಳಿಸುತ್ತಿದೆ. ಇಂದು ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ನಾಲ್ವರು ಮರಣ ಹೊಂದಿದರೆ, 664 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.

- Advertisement -

ಜಿಲ್ಲೆಯಲ್ಲಿ ಈ ವರೆಗೆ ಒಟ್ಟು 42, 729 ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಸದ್ಯಕ್ಕೆ 4,694 ಸಕ್ರಿಯ ಪ್ರಕರಣಗಳಲ್ಲಿ ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ.  ಇಂದು 256 ಮಂದಿ ಕೋವಿಡ್ ಮುಕ್ತರಾಗಿ ಮನೆ ಸೇರಿದ್ದಾರೆ. ಇಂದಿನ ನಾಲ್ಕು ಮಂದಿ ಮೃತರಾಗಿರುವ ಸಂಖ್ಯೆಯೊಂದಿಗೆ ಜಿಲ್ಲೆಯಲ್ಲಿ ಕೋವಿಡ್ ನಿಂದಾಗಿ ಮೃತಪಟ್ಟವರ ಒಟ್ಟೂ ಸಂಖ್ಯೆ 755ಕ್ಕೇರಿದೆ

Join Whatsapp