ಮಡಿಕೇರಿ: ಜಿಲ್ಲೆಯಲ್ಲಿ ಬುಧವಾರ 428 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದ್ದು, ಈ ಮೂಲಕ ಪಾಸಿಟಿವಿಟಿ ಪ್ರಮಾಣ ಶೇ.12.27 ರಷ್ಟಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ. ಸತೀಶ ತಿಳಿಸಿದ್ದಾರೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 37,262ಆಗಿದ್ದು, ಒಟ್ಟು 438 ಮರಣ ಪ್ರಕರಣಗಳು ವರದಿಯಾಗಿದೆ. 1195 ಸಕ್ರಿಯ ಪ್ರಕರಣಗಳಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಸಾವು ಉಂಟಾಗಿಲ್ಲ, ಕಂಟೈನ್ಮೆಂಟ್ ವಲಯಗಳ ಸಂಖ್ಯೆ 166 ಆಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.