ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್ ಗೆ ಕೋವಿಡ್ ಪಾಸಿಟಿವ್ !

Prasthutha|

ಲಕ್ನೋ : ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಅವರಿಗೆ ಕೋವಿಡ್ ಪಾಸಿಟಿವ್ ವರದಿಯಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಆದಿತ್ಯನಾಥ್, ಕೋವಿಡ್ ಲಕ್ಷಣಗಳು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ನಾನು ಪರೀಕ್ಷೆ ನಡೆಸಿದ್ದೆ. ಆ ವೇಳೆ ಪಾಸಿಟಿವ್ ಇರುವುದು ಪತ್ತೆಯಾಗಿದೆ ಎಂದಿದ್ದಾರೆ. ಸ್ವಯಂ ಐಸೋಲೇಶನ್ ಗೊಳಗಾಗಿದ್ದೇನೆ ಎಂದೂ ಹೇಳಿದ್ದಾರೆ.

- Advertisement -

ರಾಜ್ಯ ಸರ್ಕಾರದ ಎಲ್ಲಾ ಕಾರ್ಯಗಳು ಸುಸೂತ್ರವಾಗಿ ನಡೆಯುತ್ತದೆ. ನನ್ನೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಸೂಕ್ತ ಮುನ್ನೆಚ್ಚರಿಕೆಗಳನ್ನು ಪಾಲಿಸುವಂತೆ ಅವರು ಟ್ವಿಟ್ಟರ್ ಮೂಲಕ ಕೋರಿದ್ದಾರೆ

Join Whatsapp