ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಕೊರೋನ ಪಾಸಿಟಿವ್ !
Prasthutha: April 16, 2021

ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರಿಗೆ ಕೋವಿಡ್ ಪಾಸಿಟಿವ್ ವರದಿಯಾಗಿದೆ. ಇಂದು ಬೆಳಗ್ಗೆಯಷ್ಟೇ ಕೋವಿಡ್ ತಜ್ಞರ ಸಭೆ ನಡೆಸಿದ್ದ ಯಡಿಯೂರಪ್ಪನವರಿಗೆ ಜ್ವರ ಇರುವ ಕುರಿತು ನಿನ್ನೆ ವರದಿಯಾಗಿತ್ತು. ಚುನಾವಣಾ ಪ್ರಚಾರ ಸಭೆ ನಡೆಸಿದ್ದ ಮುಖ್ಯಮಂತ್ರಿಗಳು ಜ್ವರ ಕಾರಣದಿಂದ ಅರ್ಧದಲ್ಲೇ ಮೊಟಕುಗೊಳಿಸಿ ವಿಶ್ರಾಂತಿ ಪಡೆದಿದ್ದರು.
ಮುಖ್ಯಮಂತ್ರಿಗಳು ಜ್ವರದಿಂದ ಬಳಲುತ್ತಿದ್ದ ಹಿನ್ನಲೆಯಲ್ಲಿ ಇಂದು ರಾಮಯ್ಯ ಆಸ್ಪತ್ರೆಯಲ್ಲಿ ಜನರಲ್ ಚೆಕಪ್ ಗೆ ಹೋಗಿದ್ದು ಅಲ್ಲಿ ಕೋವಿಡ್ ಟೆಸ್ಟ್ ಮಾಡಲಾಗಿದ್ದು ವರದಿಯಲ್ಲಿ ಪಾಸಿಟಿವ್ ಬಂದಿರುವ ಕಾರಣ ಮುಖ್ಯಮಂತ್ರಿಗಳನ್ನು ಮಣಿಪಾಲ್ ಆಸ್ಪತ್ರೆ ಗೆ ಶಿಪ್ಟ್ ಮಾಡಲಾಗಿದೆ. ಮುಖ್ಯಮಂತ್ರಿಗಳ ಕುಟುಂಬ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಇದು ಮುಖ್ಯಮಂತ್ರಿಗಳಿಗೆ ಎರಡನೇ ಬಾರಿ ಕೊರೋನಾ ಪಾಸಿಟಿವ್ ಬಂದಿರುವುದು. ಕಳೆದ ಆಗಸ್ಟ್ 3 ರಂದು ಯಡಿಯೂರಪ್ಪನವರಿಗೆ ಮೊದಲ ಬಾರಿಗೆ ಕೋವಿಡ್ ಪಾಸಿಟಿವ್ ವರದಿಯಾಗಿತ್ತು.
