ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಗೆ ಕೋವಿಡ್ ಪಾಸಿಟಿವ್ !

Prasthutha|

ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿಯವರಿಗೆ ಕೋವಿಡ್ ಪಾಸಿಟಿವ್ ವರದಿಯಾಗಿದೆ. ಈ ಕುರಿತು ಅವರು ಇಂದು ಟ್ವೀಟ್ ಮಾಡಿದ್ದಾರೆ. ನನ್ನ ಕೋವಿಡ್ ಪರೀಕ್ಷೆಯ ವರದಿ ಪಾಸಿಟಿವ್ ಬಂದಿದೆ. ಆದುದರಿಂದ ಕಳೆದ ಕೆಲವು ದಿನಗಳಿಂದ ನನ್ನ ಜೊತೆ ಸಂಪರ್ಕಕ್ಕೆ ಬಂದವರು ಕೋವಿಡ್ ಪರೀಕ್ಷೆ ಮಾಡಿಕೊಳ್ಳಿ ಎಂದು ಟ್ವೀಟ್ ಮೂಲಕ ವಿನಂತಿಸಿದ್ದಾರೆ.

ಉಪಚುನಾವಣೆಗಳ ಪ್ರಚಾರದಲ್ಲಿ ಕುಮಾರಸ್ವಾಮಿಯವರು ಭಾಗವಹಿಸಿದ್ದರು. ಹಲವು ಪ್ರಚಾರ ಸಭೆಗಳಲ್ಲಿ ಕೂಡಾ ಪಾಲ್ಗೊಂಡಿದ್ದರು. ಇಂದು ಶೀತ, ಜ್ವರ ಕಾಣಿಸಿಕೊಂಡಿದ್ದರಿಂದಾಗಿ ಟೆಸ್ಟ್ ಮಾಡಿಸಿದ್ದರು. ಆ ವೇಳೆ ಕೋವಿಡ್ ಪಾಸಿಟಿವ್ ವರದಿ ಬಂದಿದೆ ಎನ್ನಲಾಗಿದೆ.

- Advertisement -