ಜೈಲಿನಲ್ಲಿರುವ ಪತ್ರಕರ್ತ ಸಿದ್ದೀಕ್ ಕಾಪ್ಪನ್ ಗೆ ಕೋವಿಡ್ ಪಾಸಿಟಿವ್ !

Prasthutha: April 21, 2021

ಮಥುರಾ ಜೈಲಿನಲ್ಲಿರುವ ಕೇರಳ ಪತ್ರಕರ್ತ ಸಿದ್ದೀಕ್ ಕಾಪ್ಪನ್ ಅವರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಆದಿತ್ಯನಾಥ್ ಆಡಳಿತದ ಉತ್ತರ ಪ್ರದೇಶದ ಹಥ್ರಾಸ್ ನಲ್ಲಿ ನಡೆದಿದ್ದ ದಲಿತ ಯುವತಿಯ ಮೇಲಿನ ಅತ್ಯಾಚಾರ ಪ್ರಕಾರಣವನ್ನು ವರದಿ ಮಾಡಲೆಂದು ತೆರಳುತ್ತಿದ್ದ ಕೇರಳ ಪತ್ರಕರ್ತ ಸಿದ್ದೀಕ್ ಕಾಪ್ಪನ್ ಸೇರಿದಂತೆ ಮೂವರನ್ನು ಕಳೆದ ವರ್ಷ ಅಕ್ಟೋಬರ್ ನಲ್ಲಿ ಪೊಲೀಸರು ಬಂಧಿಸಿದ್ದರು. ಮಾತ್ರವಲ್ಲ ಅವರ ಮೇಲೆ ಕರಾಳ ಕಾನೂನಾಗಿರುವ ಯುಎಪಿಎ ಹೇರಲಾಗಿತ್ತು. ಇದೀಗ ತೀವ್ರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿರುವ ಅವರನ್ನು ಇದೀಗ ಜೈಲಾಸ್ಪತ್ರೆಗೆ ವರ್ಗಾಯಿಸಲಾಗಿದೆ.

ಕಾಪ್ಪನ್ ಅವರ ವಕೀಲರಾಗಿರುವ ವಿಲ್ಸ್ ಮಾಥ್ಯೂ ಅವರು ಪತ್ನಿ ರೈಹಾನಾರಿಗೆ ಈ ಮಾಹಿತಿ ತಿಳಿಸಿದ್ದಾರೆ.

ಕಾಪ್ಪನ್ ಅವರು ರಮಝಾನಿನ ಉಪವಾಸವನ್ನು ಕೇವಲ ಮೊಸರು ಮತ್ತು ಮುಳ್ಳು ಸೌತೆಯ ಮೂಲಕ ನಿರ್ವಹಿಸುತ್ತಿದ್ದಾರೆ ಎನ್ನಲಾಗಿದೆ. ಕುಟುಂಬದವರು ಜೈಲಿಗೆ ಆಹಾರ ಪೂರೈಕೆ ಮಾಡುವ ಪ್ರಯತ್ನ ನಡೆಸುತ್ತಿದ್ದರಾದರೂ ಕೋವಿಡ್ ನಿರ್ಬಂಧಗಳಿಂದಾಗಿ ಅದು ಸಾಧ್ಯವಾಗಿಲ್ಲ ಎಂದು ತಿಳಿಸಿದ್ದಾರೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!