ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕೋವಿಡ್ ಪಾಸಿಟಿವ್ ದೃಢ !

Prasthutha|

ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಈ ಕುರಿತು ಸ್ವತಃ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದು, ಲಘು ಕೋವಿಡ್ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ  ನಾನು ಪರೀಕ್ಷೆಗೊಳಪಟ್ಟಿದ್ದು, ನನಗೆ ಕೋವಿಡ್ ಪಾಸಿಟಿವ್ ಬಂದಿದೆ ಎಂದು ಟ್ವೀಟ್ ಮಾಡಿದ್ದಾರೆ.

ದೇಶದಲ್ಲಿ ಈಗ ಎರಡನೇ ಕೋವಿಡ್ ಅಲೆ ಅಪ್ಪಳಿಸಿದ್ದು, ದಿನಂಪ್ರತಿ ಕೋವಿಡ್ ಸೋಂಕಿಗೊಳಗಾಗುವವರ ಸಂಖ್ಯೆ ಲಕ್ಷ ದಾಟುತ್ತಿದೆ.

- Advertisement -