ದೇಶದಲ್ಲಿ ನಾಳೆಯಿಂದ ಕೋವಿಡ್‌ ನಿರ್ಬಂಧ ಗಳು ರದ್ದು !

Prasthutha|

ನವದೆಹಲಿ : ದೇಶದಲ್ಲಿ ಕೋವಿಡ್ -19 ಪ್ರಕರಣಗಳ ಇಳಿಕೆಯಿಂದಾಗಿ ಸುಮಾರು ಎರಡು ವರ್ಷಗಳ ನಂತರ ಕೋವಿಡ್ ಸಂಬಂಧಿತ ನಿರ್ಬಂಧಗಳು ನಾಳೆ ಕೊನೆಗೊಳ್ಳಲಿವೆ. ಕೇಂದ್ರ ಸರ್ಕಾರದ ಆದೇಶದ ಪ್ರಕಾರ, ಫೇಸ್ ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರವನ್ನ ಕಾಯ್ದುಕೊಳ್ಳುವುದು ಮೊದಲಿನಂತೆಯೇ ಮುಂದುವರಿಯುತ್ತದೆ.

- Advertisement -

ಈ ತಿಂಗಳ ಆರಂಭದಲ್ಲಿ, ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರವನ್ನ ಕಳುಹಿಸಿದ್ದಾರೆ. ಇನ್ನು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ (NDMA) ಏಪ್ರಿಲ್ 1, 2022 ರಿಂದ ಸ್ಥಗಿತಗೊಳ್ಳಲಿದೆ ಎಂದು ಬರೆದಿದ್ದಾರೆ.

ಕೋವಿಡ್ ಪರಿಸ್ಥಿತಿಯಲ್ಲಿನ ಸುಧಾರಣೆ ಮತ್ತು ಸಾಂಕ್ರಾಮಿಕ ರೋಗವನ್ನ ಎದುರಿಸಲು ಸರ್ಕಾರದ ಸನ್ನದ್ಧತೆಯನ್ನ ಪರಿಗಣಿಸಿ, ಎನ್ಡಿಎಂಎ ಕೋವಿಡ್ ನಿಯಂತ್ರಣ ಕ್ರಮಗಳಿಗಾಗಿ ವಿಪತ್ತು ನಿರ್ವಹಣಾ ಕಾಯ್ದೆಯ ನಿಬಂಧನೆಯನ್ನ ಅನ್ವಯಿಸುವ ಅಗತ್ಯವಿಲ್ಲ ಎನ್ನುವ ನಿರ್ಧಾರ ತೆಗೆದುಕೊಂಡಿದೆ. ಆದಾಗ್ಯೂ, ಪರಿಸ್ಥಿತಿಯ ಬಗ್ಗೆ ಜಾಗರೂಕರಾಗಿರಬೇಕು ಎಂದು ಕೇಂದ್ರ ಸರ್ಕಾರ ಜನರನ್ನ ಒತ್ತಾಯಿಸಿದೆ.

Join Whatsapp