ಬೆಂಗಳೂರು: ಕೋವಿಡ್ ನಿಯಮಗಳನ್ನು ಉಲ್ಲಂಘಿಸಿರುವ ಬಿಜೆಪಿ ನಾಯಕರು ಹಾಗೂ ಕರ್ತವ್ಯ ನಿರ್ವಹಣೆಯಲ್ಲಿ ವಿಫಲರಾದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಮಂಗಳವಾರ ಕೆಪಿಸಿಸಿಯಿಂದ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಅವರಿಗೆ ಮನವಿ ಸಲ್ಲಿಸಲಾಯಿತು.
ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್, ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ಡಾ. ಬಿ.ಎಲ್ ಶಂಕರ್, ಮಾಜಿ ಸಂಸದರಾದ ವಿ.ಎಸ್ ಉಗ್ರಪ್ಪ, ಮಾಜಿ ನಿಗಮದ ಅಧ್ಯಕ್ಷರಾದ ವಿಜಯ್ ಮುಳಗುಂದ ಸೇರಿದಂತೆ ಪಕ್ಷದ ಮುಖಂಡರು ಒಳಗೊಂಡ ಕಾಂಗ್ರೆಸ್ ಪಕ್ಷದ ನಿಯೋಗವು ವಿಧಾನಸೌಧದ ಮೂರನೇ ಮಹಡಿಯಲ್ಲಿ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿತು.