Home ಟಾಪ್ ಸುದ್ದಿಗಳು ಕೋವಿಡ್ ಆತಂಕ: ರಾಜ್ಯದಲ್ಲಿ ಪ್ರತಿನಿತ್ಯ 5 ಸಾವಿರ ಕೋವಿಡ್ ಪರೀಕ್ಷೆ

ಕೋವಿಡ್ ಆತಂಕ: ರಾಜ್ಯದಲ್ಲಿ ಪ್ರತಿನಿತ್ಯ 5 ಸಾವಿರ ಕೋವಿಡ್ ಪರೀಕ್ಷೆ

ಬೆಂಗಳೂರು: ಡಿಸೆಂಬರ್ 23ರಿಂದ ರಾಜ್ಯದಲ್ಲಿ ಪ್ರತಿನಿತ್ಯ 5 ಸಾವಿರ ಪರೀಕ್ಷೆ ನಡೆಸಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ವಿಕಾಸಸೌಧದಲ್ಲಿ ನಡೆದ ತಾಂತ್ರಿಕ ಸಲಹಾ ಸಮಿತಿ ಸಭೆ ಬಳಿಕ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಡಿಸೆಂಬರ್ 23ರಿಂದ ರಾಜ್ಯದಲ್ಲಿ ಪ್ರತಿನಿತ್ಯ 5 ಸಾವಿರ ಪರೀಕ್ಷೆ ನಡೆಸಲಾಗುತ್ತದೆ. ಆಕ್ಸಿಜನ್, ವೆಂಟಿಲೇಟರ್, ಐಸಿಯು ಬೆಡ್ಗಳನ್ನು ಸನ್ನದ್ಧ ಸ್ಥಿತಿಯಲ್ಲಿರಿಸಬೇಕು. ಜಿಲ್ಲಾ ಆರೋಗ್ಯ ಅಧಿಕಾರಿಗಳ ಜತೆ ವರ್ಚುವಲ್ ಸಭೆ ನಡೆಸಿ ಕೋವಿಡ್ ಕುರಿತು ನಿಗಾ ಇಡುವಂತೆ ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಕೊರೊನಾ ಮಾರ್ಗಸೂಚಿ ಯನ್ನು ಕಟ್ಟುನಿಟ್ಟಾಗಿ ಪಾಲಿಸಿ ಎಂದು ರಾಜ್ಯದ ಜನತೆಗೆ ಮನವಿ ಮಾಡಿದ್ದಾರೆ. ಕೋವಿಡ್ -19 ವೈರಸ್ ಹರಡದಂತೆ ತಡೆಗಟ್ಟಲು ನಮ್ಮ ಸರ್ಕಾರವು ಸಮರೋಪಾದಿಯಲ್ಲಿ ಕಾರ್ಯಪ್ರವೃತ್ತವಾಗಿದೆ. ನಮ್ಮ ಪ್ರಯತ್ನ ಫಲನೀಡಬೇಕಾದರೆ ಸಾರ್ವಜನಿಕರ ಸಹಕಾರವೂ ಅತಿ ಮುಖ್ಯ ಎಂದಿದ್ದಾರೆ.

Join Whatsapp
Exit mobile version