ಕೋವಿಡ್ ಭೀತಿ: ರಾಜ್ಯದಲ್ಲಿ ಟಫ್ ರೂಲ್ಸ್ ಇಲ್ಲ ಎಂದ ಸಿಎಂ ಬೊಮ್ಮಾಯಿ

Prasthutha|

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು ದೇಶದ ವಿವಿಧ ರಾಜ್ಯಗಳ ಮುಖ್ಯ ಮಂತ್ರಿಗಳೊಂದಿಗೆ ಕೋವಿಡ್ ಪರಿಸ್ಥಿತಿ ಕುರಿತು ನಡೆಸಿದ ವೀಡಿಯೋ ಕಾನ್ಫರೆನ್ಸ್ ನಲ್ಲಿ ರಾಜ್ಯದ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಂಗಳೂರಿನ ಗೃಹ ಕಚೇರಿ ಕೃಷ್ಣಾದಿಂದ ಪಾಲ್ಗೊಂಡರು.

- Advertisement -


ಆರೋಗ್ಯ ಸಚಿವ ಡಾ:ಕೆ.ಸುಧಾಕರ್, ವಸತಿ ಸಚಿವ ವಿ.ಸೋಮಣ್ಣ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಮುಖ್ಯಮಂತ್ರಿಗಳ ಪ್ರಧಾನ ಮಂಜುನಾಥ್ ಪ್ರಸಾದ್, ಆರೋಗ್ಯ ಇಲಾಖೆ ಆಯುಕ್ತ ಡಿ. ರಂದೀಪ್, ಪ್ರಧಾನ ಕಾರ್ಯದರ್ಶಿ ಟಿ.ಕೆ ಅನಿಲ್ ಕುಮಾರ್, ರಾಷ್ಟ್ರೀಯ ಆರೋಗ್ಯ ಮಿಷನ್ ನಿರ್ದೇಶಕಿ ಡಾ: ಅರುಂಧತಿ ಚಂದ್ರಶೇಖರ್, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ತುಷಾರ ಗಿರಿನಾಥ, ಗುಪ್ತ ವಾರ್ತೆ ಎಡಿಜಿಪಿ ದಯಾನಂದ ಸೇರಿದಂತೆ ಇತರರು ಉಪಸ್ಥಿತರಿದ್ದರು.


ವೀಡಿಯೋ ಕಾನ್ಫರೆನ್ಸ್ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ರಾಜ್ಯದಲ್ಲಿ ಸದ್ಯಕ್ಕೆ ಟಫ್ ರೂಲ್ಸ್ ಇಲ್ಲ ಎಂದಿದ್ದಾರೆ. ಅಲ್ಲದೇ ನಿತ್ಯ 30 ಸಾವಿರ ಟೆಸ್ಟಿಂಗ್ ನಡೆಸುವಂತೆ ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.
ಎಲ್ಲಾ ಶಾಲೆಗಳಲ್ಲಿ 6ರಿಂದ 12 ವರ್ಷದವರೆಗಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡಲು ನಿರ್ಧರಿಸಲಾಗಿದ್ದು, ಅನವಶ್ಯಕ ನಿರ್ಬಂಧ ಹೇರದಂತೆ ಸೂಚಿಸಿದ್ದಾರೆ. ಮುಂಜಾಗ್ರತೆ ವಹಿಸಿ ವ್ಯಾಪಾರ ನಡೆಸುವಂತೆ ರಾಜ್ಯದಲ್ಲಿ ಟೆಸ್ಟಿಂಗ್, ಟ್ರೇಸಿಂಗ್ ಹೆಚ್ಚಾಗಿ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

- Advertisement -


ಇನ್ನು ಇದಕ್ಕೂ ಮೊದಲು ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಿದ ಪ್ರಧಾನಿ ಮೋದಿ, ಕೋವಿಡ್ ನಿಯಮಗಳನ್ನು ದೇಶಾದ್ಯಂತ ಜನತೆ ಕಡ್ಡಾಯವಾಗಿ ಪಾಲನೆ ಮಾಡಬೇಕೆಂದು ವಿನಂತಿಸಿದ್ದಾರೆ. ಕೋವಿಡ್ ಟೆಸ್ಟಿಂಗ್, ಟ್ರ್ಯಾಕಿಂಗ್ ಹಾಗೂ ಟ್ರೀಟ್ ಮೆಂಟ್ಗೆ ಹೆಚ್ಚಿನ ಒತ್ತು ನೀಡುವಂತೆ ಪ್ರಧಾನಿ ಮೋದಿ ಸಲಹೆ ನೀಡಿದ್ದು,ದೇಶದ ಎಲ್ಲಾ ರಾಜ್ಯ ಸರ್ಕಾರಗಳೂ ತಮ್ಮ ತಮ್ಮ ರಾಜ್ಯದಲ್ಲಿ ಆಸ್ಪತ್ರೆಗಳನ್ನು ಸಜ್ಜಾಗಿ ಇಟ್ಟುಕೊಳ್ಳಿ ಎಂದು ಸೂಚಿಸಿದ್ದಾರೆ.



Join Whatsapp