ದೇಶದಲ್ಲಿ ಮತ್ತೆ ಕೋವಿಡ್ ಆರ್ಭಟ: ಸಕ್ರಿಯ ಪ್ರಕರಣ 44,513ಕ್ಕೇರಿಕೆ !

Prasthutha|

ನವದೆಹಲಿ: ದೇಶದಲ್ಲಿ ಮತ್ತೆ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು, ಕಳೆದ 24ಗಂಟೆಗಳ ಅವಧಿಯಲ್ಲಿ 8,582 ಹೊಸ ಪ್ರಕರಣಗಳು ವರದಿಯಾಗಿದ್ದು, ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು ಕೋವಿಡ್ 4ನೇ ಅಲೆಯ ಭೀತಿಯನ್ನು ಹೆಚ್ಚಿಸಿದೆ.

- Advertisement -

ದೇಶದಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 44,513ಕ್ಕೆ ಏರಿಕೆ ಕಂಡಿದ್ದು, ಇದರೊಂದಿಗೆ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ 4,32,22,017ಕ್ಕೆ ಏರಿಕೆಯಾಗಿದೆ. ಅಲ್ಲದೇ, ಕೋವಿಡ್ ನಿಂದ ಸಾವನ್ನಪ್ಪಿರುವವರ ಸಂಖ್ಯೆ 5,24,761ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಗಳಲ್ಲಿ 4,435 ಮಂದಿ ಗುಣಮುಖರಾಗಿದ್ದು, ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 4,26,52,743ಕ್ಕೆ ತಲುಪಿದೆ.



Join Whatsapp