ಮಂಗಳೂರು: ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ದಿನನಿತ್ಯ ಕೋವಿಡ್-19 ಸೋಂಕು ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಸೋಂಕು ನಿಯಂತ್ರಿಸಲು ಮಹಾನಗರ ಪಾಲಿಕೆಯ ವ್ಯಾಪ್ತಿಯೊಳಗೆ ಬರುವ ಎಲ್ಲಾ ಹೋಟೆಲ್ ಮತ್ತು ರೆಸ್ಟೋರೆಂಟ್‍ಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಕೋವಿಡ್-19 ಪರೀಕ್ಷೆ ನಡೆಸುವುದು ಕಡ್ಡಾಯವಾಗಿದೆ ಎಂದು ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್ ತಿಳಿಸಿದ್ದಾರೆ.
ಸಾರ್ವಜನಿಕರಿಗೆ ಅನುಕೂಲವಾಗುವಂತೆ ಎಲ್ಲಾ ನಗರ ಆರೋಗ್ಯ ಕೇಂದ್ರಗಳಲ್ಲಿ ಸಂಜೆಯ ವೇಳೆಯಲ್ಲಿ ಕೋವಿಡ್-19 ಪರೀಕ್ಷೆ ನಡೆಸಲಾಗುತ್ತಿದ್ದು, ಸಾರ್ವಜನಿಕರು ಹಾಗೂ ಹೋಟೆಲ್ ಅಥವಾ ರೆಸ್ಟೋರೆಂಟ್‍ಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಕಾರ್ಮಿಕರು ಇದರ ಸದುಪಯೋಗ ಪಡೆಯುವಂತೆ ಮನವಿ ಮಾಡಿದ್ದಾರೆ.