ಇಂದೋರ್: ಉದ್ಯೋಗದ ನಿಮಿತ್ತ ದುಬೈಗೆ ತೆರಳಲು ಏರ್ ಇಂಡಿಯಾ ವಿಮಾನ ಹತ್ತಿದ್ದ ವ್ಯಕ್ತಿಯೊಬ್ಬರಿಗೆ ಕೋವಿಡ್ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ವಿಮಾನದಿಂದ ಕೆಳಗಿಳಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್ ವಿಮಾನ ನಿಲ್ದಾಣದಲ್ಲಿ ನಡೆದಿದೆ.
ವ್ಯಕ್ತಿಗೆ ಯಾವುದೇ ರೋಗ ಲಕ್ಷಣಗಳು ಇರಲಿಲ್ಲ. ಆದರೂ ಅವರನ್ನು ಕೋವಿಡ್ ರೋಗಿಗಳಿಗಾಗಿ ಸ್ಥಾಪಿಸಲಾದ ಆರೈಕೆ ಕೇಂದ್ರಕ್ಕೆ ಸೇರಿಸಲಾಯಿತು.
ಬುಧವಾರ ಇಲ್ಲಿನ ದೇವಿ ಅಹಲ್ಯಾಬಾಯಿ ಹೋಲ್ಕರ್ ವಿಮಾನ ನಿಲ್ದಾಣದಲ್ಲಿ ಇಂದೋರ್-ದುಬೈ ವಿಮಾನದ 117 ಪ್ರಯಾಣಿಕರಿಗೆ ಆರ್ ಟಿ-ಪಿಸಿಆರ್ ಪರೀಕ್ಷೆಗಳನ್ನು ನಡೆಸಲಾಯಿತು. ಅವರಲ್ಲಿ 26 ವರ್ಷದ ವ್ಯಕ್ತಿಗೆ ಕೋವಿಡ್ ದೃಢಪಟ್ಟಿತ್ತು’ ಎಂದು ಕೋವಿಡ್-19 ತಡೆಗಟ್ಟುವಿಕೆಯ ನೋಡಲ್ ಅಧಿಕಾರಿಯೊಬ್ಬರೂ ಹೇಳಿದ್ದಾರೆ.