ದುಬೈಗೆ ಹೊರಟಿದ್ದ ವ್ಯಕ್ತಿಯಲ್ಲಿ ಕೋವಿಡ್ ದೃಢ: ವಿಮಾನದಿಂದ ಕೆಳಗಿಳಿಸಿದ ಸಿಬ್ಬಂದಿ

Prasthutha|

ಇಂದೋರ್: ಉದ್ಯೋಗದ ನಿಮಿತ್ತ ದುಬೈಗೆ ತೆರಳಲು ಏರ್ ಇಂಡಿಯಾ ವಿಮಾನ ಹತ್ತಿದ್ದ ವ್ಯಕ್ತಿಯೊಬ್ಬರಿಗೆ ಕೋವಿಡ್ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ವಿಮಾನದಿಂದ ಕೆಳಗಿಳಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್ ವಿಮಾನ ನಿಲ್ದಾಣದಲ್ಲಿ ನಡೆದಿದೆ.

- Advertisement -

ವ್ಯಕ್ತಿಗೆ ಯಾವುದೇ ರೋಗ ಲಕ್ಷಣಗಳು ಇರಲಿಲ್ಲ. ಆದರೂ ಅವರನ್ನು ಕೋವಿಡ್ ರೋಗಿಗಳಿಗಾಗಿ ಸ್ಥಾಪಿಸಲಾದ ಆರೈಕೆ ಕೇಂದ್ರಕ್ಕೆ ಸೇರಿಸಲಾಯಿತು.

ಬುಧವಾರ ಇಲ್ಲಿನ ದೇವಿ ಅಹಲ್ಯಾಬಾಯಿ ಹೋಲ್ಕರ್ ವಿಮಾನ ನಿಲ್ದಾಣದಲ್ಲಿ ಇಂದೋರ್-ದುಬೈ ವಿಮಾನದ 117 ಪ್ರಯಾಣಿಕರಿಗೆ ಆರ್‌ ಟಿ-ಪಿಸಿಆರ್ ಪರೀಕ್ಷೆಗಳನ್ನು ನಡೆಸಲಾಯಿತು. ಅವರಲ್ಲಿ 26 ವರ್ಷದ ವ್ಯಕ್ತಿಗೆ ಕೋವಿಡ್ ದೃಢಪಟ್ಟಿತ್ತು’ ಎಂದು ಕೋವಿಡ್-19 ತಡೆಗಟ್ಟುವಿಕೆಯ ನೋಡಲ್ ಅಧಿಕಾರಿಯೊಬ್ಬರೂ ಹೇಳಿದ್ದಾರೆ.

Join Whatsapp